Australia: ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಕನಸು ಚೂರು ಚೂರು..!
T20 World Cup 2024: ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡ ಮೂರು ಸ್ವರೂಪಗಳಲ್ಲೂ ಏಕ ಕಾಲಕ್ಕೆ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಅಂದರೆ ಟೆಸ್ಟ್, ಏಕದಿನ ಮತ್ತು ಟಿ20 ವಿಶ್ವಕಪ್ನಲ್ಲಿ ಬ್ಯಾಕ್ ಟು ಬ್ಯಾಕ್ ವಿಶ್ವ ಚಾಂಪಿಯನ್ ಪಟ್ಟಕ್ಕೇರಿಲ್ಲ. ಅಂತಹದೊಂದು ವಿಶೇಷ ಸಾಧನೆ ಮಾಡುವ ಅವಕಾಶ ಆಸ್ಟ್ರೇಲಿಯಾ ತಂಡದ ಮುಂದಿತ್ತು. ಆದರೀಗ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಸೇರಿ ಈ ಕನಸನ್ನು ನುಚ್ಚು ನೂರು ಮಾಡಿದೆ.
1 / 6
T20 World Cup 2024: ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯನ್ ಪಟ್ಟಕ್ಕೇರಬೇಕೆಂಬ ಆಸ್ಟ್ರೇಲಿಯಾ (Australia) ತಂಡದ ಕನಸು ಸೂಪರ್-8 ಸುತ್ತಿನಲ್ಲೇ ಕಮರಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆಸೀಸ್ ಪಡೆ, ದ್ವಿತೀಯ ಸುತ್ತಿನಲ್ಲಿ ಅಫ್ಘಾನಿಸ್ತಾನ್ ಮತ್ತು ಭಾರತ ವಿರುದ್ಧ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್ನಿಂದ ಹೊರಬಿದ್ದಿದೆ.
2 / 6
ಈ ಹೊರಬೀಳುವಿಕೆಯೊಂದಿಗೆ ಆಸ್ಟ್ರೇಲಿಯಾ ತಂಡದ ಬಹುದೊಡ್ಡ ಕನಸು ಕೂಡ ನುಚ್ಚು ನೂರಾಗಿದೆ. ಅಂದರೆ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಬಾರಿ ಮೂರು ಸ್ವರೂಪಗಳಲ್ಲಿ ಯಾವುದೇ ತಂಡ ವಿಶ್ವ ಚಾಂಪಿಯನ್ ಆಗಿರಲಿಲ್ಲ. ಈ ಬಾರಿ ಆಸೀಸ್ ಪಡೆಗೆ ಅಂತಹದೊಂದು ವಿಶ್ವ ದಾಖಲೆ ನಿರ್ಮಿಸುವ ಅವಕಾಶವಿತ್ತು. ಅಲ್ಲದೆ ಅದನ್ನೇ ಸಾಧಿಸಿಯೇ ತೀರುತ್ತೇವೆ ಎಂಬ ಆತ್ಮ ವಿಶ್ವಾಸವಿತ್ತು.
3 / 6
ಆಸ್ಟ್ರೇಲಿಯಾ ತಂಡವು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ್ದರು. ಇಂಗ್ಲೆಂಡ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್ಗಳಿಂದ ಸೋಲಿಸಿ ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.
4 / 6
ಇನ್ನು 2023 ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲೂ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್ ಅಲಂಕರಿಸಿತ್ತು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 6 ವಿಕೆಟ್ಗಳಿಂದ ಮಣಿಸಿ ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿದಿತ್ತು.
5 / 6
ಅದರಂತೆ 2024 ರ ಟಿ20 ವಿಶ್ವಕಪ್ನಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದೊಂದಿಗೆ ಆಸೀಸ್ ಪಡೆ ಕೆರಿಬಿಯನ್ ದ್ವೀಪಕ್ಕೆ ಆಗಮಿಸಿದ್ದರು. ಈ ಮೂಲಕ ಮೂರು ಸ್ವರೂಪಗಳಲ್ಲೂ ಏಕಾಧಿಪತ್ಯ ಸ್ಥಾಪಿಸುವ ವಿಶ್ವಾಸದಲ್ಲಿತ್ತು. ಆದರೆ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ಪಾಲಿಗೆ ಅಫ್ಘಾನಿಸ್ತಾನ್ ಕಂಟಕವಾಗಿ ಮಾರ್ಪಟ್ಟಿದೆ. ಸೂಪರ್-8 ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ 2 ಅಂಕ ಪಡೆದಿದ್ದ ಅಫ್ಘಾನ್ನರು, ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಮಣಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದೆ.
6 / 6
ಇದರೊಂದಿಗೆ ಒಂದೇ ಬಾರಿ ಮೂರು ಸ್ವರೂಪದ ಟೂರ್ನಿಯಲ್ಲೂ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸುವ ಆಸ್ಟ್ರೇಲಿಯಾ ತಂಡದ ಬಹು ದೊಡ್ಡ ಕನಸು ಕೂಡ ಕಮರಿದೆ. ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಕ್ಕ ಈ ಅವಕಾಶ ಕೈ ಚೆಲ್ಲಿಕೊಂಡಿರುವ ಆಸ್ಟ್ರೇಲಿಯಾ ಈ ಸಾಧನೆ ಮಾಡಲು ಮತ್ತೊಮ್ಮೆ ಐಸಿಸಿಯ ಮೂರು ಟೂರ್ನಿಗಳಲ್ಲೂ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟಕ್ಕೇರಬೇಕಿದೆ. ಆದರೆ ಸದ್ಯದ ಮಟ್ಟಿಗೆ ಇದು ಅಸಾಧ್ಯ ಎಂದೇ ಹೇಳಬಹುದು.