IND vs AUS: ಒಂದು ದಿನ ಮುಂಚೆಯೇ ಬಲಿಷ್ಠ ಪ್ಲೇಯಿಂಗ್ 11 ಘೋಷಿಸಿದ ಆಸ್ಟೇಲಿಯಾ

|

Updated on: Dec 05, 2024 | 12:30 PM

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ನಾಳೆಯಿಂದ (ಡಿ.6) ಶುರುವಾಗಲಿದೆ. ಅಡಿಲೇಡ್​​ನಲ್ಲಿ ಜರುಗಲಿರುವ ಈ ಪಂದ್ಯದ ಮೂಲಕ ಆಸ್ಟ್ರೇಲಿಯಾ ತಂಡವು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಏಕೆಂದರೆ ಈ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

1 / 6
ಅಡಿಲೇಡ್​ನ ಓವಲ್ ಮೈದಾನದಲ್ಲಿ ಶುಕ್ರವಾರದಿಂದ ಶುರುವಾಗಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಆಸೀಸ್ ಪಡೆಯಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅದರಂತೆ ಸ್ಕಾಟ್ ಬೋಲ್ಯಾಂಡ್​ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

2 / 6
ಪರ್ತ್​ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಜೋಶ್ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಮತ್ತೋರ್ವ ವೇಗಿ ಸ್ಕಾಟ್ ಬೋಲ್ಯಾಂಡ್​ ಅವರನ್ನು ಪ್ಲೇಯಿಂಗ್ ಇಲೆವೆನ್​​ನಲ್ಲಿ ಸೇರಿಸಿಕೊಳ್ಳಲಾಗಿದೆ.

3 / 6
ಇನ್ನು ಈ ಪಂದ್ಯದಲ್ಲಿ ಆರಂಭಿಕರಾಗಿ ಉಸ್ಮಾನ್ ಖ್ವಾಜಾ ಹಾಗೂ ನಾಥನ್ ಮೆಕ್‌ಸ್ವೀನಿ ಇನಿಂಗ್ಸ್ ಆರಂಭಿಸಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್, ನಾಲ್ಕನೇ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ಕಾಣಿಸಿಕೊಳ್ಳಲಿದ್ದಾರೆ.

4 / 6
ವೇಗಿಗಳಾಗಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್​ ಹಾಗೂ ಸ್ಕಾಟ್ ಬೋಲ್ಯಾಂಡ್ ಬೌಲಿಂಗ್ ಮಾಡಲಿದ್ದಾರೆ. ಇನ್ನು ಸ್ಪಿನ್ನರ್ ಆಗಿ ನಾಥನ್ ಲಿಯಾನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಆಸ್ಟ್ರೇಲಿಯಾ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

5 / 6
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೆನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

6 / 6
ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ಶುಭ್​​ಮನ್ ಗಿಲ್, ವಿರಾಟ್ ಕೊಹ್ಲಿ , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಹರ್ಷಿತ್ ರಾಣಾ , ಜಸ್​​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

Published On - 10:19 am, Thu, 5 December 24