- Kannada News Photo gallery Cricket photos Kannada News | Australia’s Scott Boland played under MS Dhoni
ಈ ಚಿತ್ರದಲ್ಲಿರುವ ವಿದೇಶಿ ಆಟಗಾರನನ್ನು ಗುರುತಿಸಬಲ್ಲಿರಾ?
WTC Final: ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
Updated on: Jun 12, 2023 | 7:23 PM

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಸ್ಕಾಟ್ ಬೋಲ್ಯಾಂಡ್.

ಅದರಲ್ಲೂ ಜೋಶ್ ಹ್ಯಾಝಲ್ವುಡ್ ಗಾಯಗೊಂಡಿದ್ದರಿಂದ ಕಣಕ್ಕಿಳಿದಿದ್ದ ಬೋಲ್ಯಾಂಡ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ವೊಬಲ್ ಎಸೆತಗಳ ಮೂಲಕ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳನ್ನು ಕಾಡಿದ ಬೋಲ್ಯಾಂಡ್ ಇದೀಗ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ.

ವಿಶೇಷ ಎಂದರೆ 34 ವರ್ಷದ ಸ್ಕಾಟ್ ಬೋಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ ಆಡಿರುವುದು ಕೇವಲ 8 ಟೆಸ್ಟ್ ಪಂದ್ಯಗಳನ್ನು ಮಾತ್ರ. ಅಷ್ಟರಲ್ಲಾಗಲೇ 33 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 14 ಏಕದಿನ ಪಂದ್ಯಗಳಿಂದ 16 ವಿಕೆಟ್ ಪಡೆದರೆ, 3 ಟಿ20 ಪಂದ್ಯಗಳಿಂದ 3 ವಿಕೆಟ್ ಕಬಳಿಸಿದ್ದಾರೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಸ್ಕಾಟ್ ಬೋಲ್ಯಾಂಡ್ ಟೆಸ್ಟ್ ಕ್ರಿಕೆಟ್ನಲ್ಲಿ ಕಳೆದ ವರ್ಷ ಪಾದರ್ಪಣೆ ಮಾಡಿದ್ದರೂ, 2016 ರಲ್ಲೇ ಟಿ20 ಕ್ರಿಕೆಟ್ಗೆ ಪರಿಚಿತರಾಗಿದ್ದರು. ಅದರಲ್ಲೂ ಐಪಿಎಲ್ನಲ್ಲೂ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

ಹೌದು, 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ ಸ್ಕಾಟ್ ಬೋಲ್ಯಾಂಡ್ 2 ಪಂದ್ಯಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದ ಬೋಲ್ಯಾಂಡ್ 3 ಓವರ್ಗಳಲ್ಲಿ 23 ರನ್ ನೀಡಿದ್ದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದಿದ್ದ ಸ್ಕಾಟ್ ಬೋಲ್ಯಾಂಡ್ 4 ಓವರ್ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಆದರೆ ಇದಾದ ಬಳಿಕ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದರೊಂದಿಗೆ ಐಪಿಎಲ್ ಕೆರಿಯರ್ ಕೂಡ ಕೊನೆಗೊಂಡಿತು.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ 5 ವಿಕೆಟ್ ಕಬಳಿಸಿ ಮಿಂಚಿರುವ ಸ್ಕಾಟ್ ಬೋಲ್ಯಾಂಡ್ ಮುಂಬರುವ ಐಪಿಎಲ್ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.




