Will Pucovski: ಒಂದು ಪಂದ್ಯವಾಡಿ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಯುವ ಬ್ಯಾಟರ್
Will Pucovski Retirement: ವಿಲ್ ಪುಕೋವ್ಸ್ಕಿ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 57 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 2350 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ 1 ದ್ವಿಶತಕ ಹಾಗೂ 7 ಶತಕಗಳು ಮತ್ತು 9 ಅರ್ಧಶತಕಗಳು ಮೂಡಿಬಂದಿವೆ. ಇನ್ನು 2021 ರಲ್ಲಿ ಭಾರತದ ಟೆಸ್ಟ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಪುಕೋವ್ಸ್ಕಿ ಮೊದಲ ಪಂದ್ಯದಲ್ಲಿ 72 ರನ್ ಬಾರಿಸಿ ಮಿಂಚಿದ್ದರು. ಆ ಬಳಿಕ ಗಾಯದ ಕಾರಣ ಹೊರಗುಳಿದ ಯಂಗ್ ಬ್ಯಾಟರ್ ಇದೀಗ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸುವ ಸುದ್ದಿಯೊಂದಿಗೆ ಮರಳಿದ್ದಾರೆ.

1 / 5

2 / 5

3 / 5

4 / 5

5 / 5