Axar Patel: ವಿಶೇಷ ಮೈಲುಗಲ್ಲು ದಾಟಿದ ಅಕ್ಷರ್ ಪಟೇಲ್

| Updated By: ಝಾಹಿರ್ ಯೂಸುಫ್

Updated on: Jan 15, 2024 | 8:34 AM

India vs Afghanistan: ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

1 / 6
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

2 / 6
ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

3 / 6
 ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

4 / 6
ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

5 / 6
ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

6 / 6
ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.