AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ ಬದೋನಿ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ವಿಶ್ವ ದಾಖಲೆ ಧೂಳೀಪಟ

Delhi Premier League T20: ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಸೌತ್ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 308 ರನ್ ಕಲೆಹಾಕಿತು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ರನ್ ಗಳಿಸಿದ 2ನೇ ತಂಡ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Sep 01, 2024 | 11:08 AM

Share
ಡೆಲ್ಲಿ ಪ್ರೀಮಿಯರ್ ಲೀಗ್ (DPL 2024) ಮೂಲಕ ಆಯುಷ್ ಬದೋನಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನ ದಾಖಲೆಗಳ ಸರದಾರ ಎನಿಸಿಕೊಂಡಿರುವ ಕ್ರಿಸ್ ಗೇಲ್ ಅವರ ವರ್ಲ್ಡ್​ ರೆಕಾರ್ಡ್ ಅನ್ನು ಉಡೀಸ್ ಮಾಡುವ ಮೂಲಕ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಹಾಗೂ ನಾರ್ಥ್ ಡೆಲ್ಲಿ ಸ್ಟೈಕರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಸ್ಪೋಟಕ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ ಸಹ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಮೈದಾನದಲ್ಲಿ ಸಿಕ್ಸ್​ಗಳ ಸುರಿಮಳೆಯಾಗಿದೆ.

2 / 5
ಅದರಲ್ಲೂ 55 ಎಸೆತಗಳನ್ನು ಎದುರಿಸಿದ ಆಯುಷ್ ಬದೋನಿ 165 ರನ್​ಗಳನ್ನು ಚಚ್ಚಿದ್ದಾರೆ. ಈ ವೇಳೆ ಯುವ ದಾಂಡಿಗನ ಬ್ಯಾಟ್​ನಿಂದ ಮೂಡಿಬಂದಂತಹ ಸಿಕ್ಸರ್​ಗಳ ಸಂಖ್ಯೆ 19. ಇದರೊಂದಿಗೆ ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಆಯುಷ್ ಬದೋನಿ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2017 ರಲ್ಲಿ ನಡೆದ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ರಂಗ್​ಪುರ್ ರೈಡರ್ಸ್ ಪರ ಕಣಕ್ಕಿಳಿದಿದ್ದ ಗೇಲ್ ಢಾಕಾ ಡೈನಾಮೈಟ್ಸ್ ವಿರುದ್ಧ 18 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಆಯುಷ್ ಬದೋನಿ ಅಳಿಸಿ ಹಾಕಿದ್ದಾರೆ.

4 / 5
ನಾರ್ಥ್ ಡೆಲ್ಲಿ ಸ್ಟೈಕರ್ಸ್ ಬೌಲರ್​ಗಳನ್ನು ಚೆಂಡಾಡಿದ ಆಯುಷ್ ಬದೋನಿ ಬರೋಬ್ಬರಿ 19 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಟಿ20 ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 165 ರನ್​ಗಳನ್ನು ಸಿಡಿಸುವ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ