AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

India vs New Zealand ODI Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರಾದಲ್ಲಿ ನಡೆದ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇನ್ನು ಈ ಸರಣಿಯ ದ್ವಿತೀಯ ಪಂದ್ಯವು ರಾಜ್​ಕೋಟ್​ನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 12, 2026 | 2:17 PM

Share
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ (Ayush Badoni) ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ವಾಷಿಂಗ್ಟನ್ ಸುಂದರ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಈ ಕಾರಣದ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಸುಂದರ್ ಕಾಣಿಸಿಕೊಳ್ಳುವುದಿಲ್ಲ.

2 / 5
ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್​ರೌಂಡರ್ ಆಯುಷ್ ಬದೋನಿ  ಆಯ್ಕೆಯಾಗಿದ್ದಾರೆ. ದೆಹಲಿ ಮೂಲದ ಬದೋನಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡದಿದ್ದಾರೆ. ಅದರಂತೆ ರಾಜ್​ಕೋಟ್ ಹಾಗೂ ಇಂದೋರ್​ನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧ 2 ಪಂದ್ಯಗಳ ವೇಳೆ ಆಯುಷ್ ಬದೋನಿ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ.

3 / 5
ಆಯುಷ್ ಬದೋನಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಈವರೆಗೆ 27 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 693 ರನ್ ಕಲೆಹಾಕಿದ್ದಾರೆ. ಹಾಗೆಯೇ 18 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇನ್ನು ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 56 ಪಂದ್ಯಗಳನ್ನಾಡಿರುವ ಅವರು ಒಟ್ಟು 6 ಅರ್ಧಶತಕಗಳೊಂದಿಗೆ 963 ರನ್​ಗಳಿಸಿದ್ದಾರೆ. ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

4 / 5
ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಯುಷ್ ಬದೋನಿ.

5 / 5
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ