CSK ತಂಡಕ್ಕೆ ಬಿಗ್ ಶಾಕ್: ಯುವ ದಾಂಡಿಗ ಐಪಿಎಲ್​ನಿಂದ ಔಟ್

Updated on: Apr 21, 2026 | 3:50 PM

Ayush Mhatre Ruled Out: ಇಂಡಿಯನ್ ಪ್ರೀಮಿಯರ್ ಲೀಗ್​​ 2026ರ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ಆರು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್​ಗಳಲ್ಲಿ ಸೋತಿರುವ ಸಿಎಸ್​ಕೆ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಐಪಿಎಲ್​​ನಿಂದ ಹೊರಬಿದ್ದಿದ್ದಾರೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸೋಲು-ಗೆಲುವಿನ ಜಂಜಾಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಯುವ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ (Ayush Mhatre) ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

2 / 5
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದಾದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದ ಆಯುಷ್​ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರು ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

3 / 5
ವೈದ್ಯಕೀಯ ವರದಿಯ ಪ್ರಕಾರ, ಅವರು ಸಂಪೂರ್ಣವಾಗಿ ಗುಣಮುಖರಾಗಲು ಕನಿಷ್ಠ 6 ರಿಂದ 12 ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿನ ಮ್ಯಾಚ್​ಗಳಿಗೆ ಆಯುಷ್ ಲಭ್ಯರಿರುವುದಿಲ್ಲ. ಅಲ್ಲದೇ ಅವರ ಬದಲಿಗೆ ಮತ್ತೋರ್ವ ಆಟಗಾರನನ್ನು ಆಯ್ಕೆ ಮಾಡಲು ಸಿಎಸ್​ಕೆ ಚಿಂತಿಸಿದೆ.

4 / 5
ಈ ಸೀಸನ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದ ಆಯುಷ್ ಮ್ಹಾತ್ರೆ 6 ಪಂದ್ಯಗಳಲ್ಲಿ 177.88 ರ ಸ್ಟ್ರೈಕ್ ರೇಟ್‌ನಲ್ಲಿ 201 ರನ್ ಗಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಅವರ ಅಲಭ್ಯತೆಯು ಸಿಎಸ್​ಕೆ ಪಾಲಿಗೆ ದೊಡ್ಡ ಹಿನ್ನಡೆಯಾಗಲಿದೆ.

5 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಖಲೀಲ್ ಅಹ್ಮದ್ (ಔಟ್), ಆಯುಷ್ ಮ್ಹಾತ್ರೆ (ಔಟ್)

Published On - 3:31 pm, Tue, 21 April 26

Follow Us