6,6,6,6: ಸಿಡಿಲಬ್ಬರದ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದ ಆಝಂ

| Updated By: ಝಾಹಿರ್ ಯೂಸುಫ್

Updated on: Feb 04, 2024 | 12:04 PM

Azam Khan: ಆಝಂ ಖಾನ್ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮೊಯೀನ್ ಖಾನ್ ಅವರ ಪುತ್ರ. ಇದೀಗ ಇಂಟರ್​ನ್ಯಾಷನಲ್​ ಲೀಗ್ ಟಿ20 ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವ ಬಲಗೈ ಬ್ಯಾಟರ್ ಆಝಂ ಸ್ಪೋಟಕ ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕೀರನ್ ಪೊಲಾರ್ಡ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ದುಬೈನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್​ ಲೀಗ್ ಟಿ20 ಟೂರ್ನಿಯಲ್ಲಿ ಪಾಕ್ ಕ್ರಿಕೆಟಿಗ ಆಝಂ ಖಾನ್ (Azam Khan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ಪೋಟಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಸರ್ಟ್ ವೈಪರ್ಸ್ ತಂಡವು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗಲ್ಫ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 160 ರನ್ ಕಲೆಹಾಕಿತು.

3 / 6
ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಡೆಸರ್ಟ್ ವೈಪರ್ಸ್ ತಂಡಕ್ಕೆ ಅಲೆಕ್ಸ್ ಹೇಲ್ಸ್​ (44) ಹಾಗೂ ಕಾಲಿನ್ ಮನ್ರೊ (51) ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಝಂ ಖಾನ್ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿದರು.

4 / 6
ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಆಝಂ ಖಾನ್ ಗಲ್ಫ್ ಜೈಂಟ್ಸ್​ ಬೌಲರ್​ಗಳನ್ನು ಚೆಂಡಾಡಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಯಾಯಿತು. ಈ ಸಿಕ್ಸ್​-ಫೋರ್​ಗಳೊಂದಿಗೆ ಕೇವಲ 18 ಎಸೆತಗಳಲ್ಲಿ ಆಝಂ ಖಾನ್ ಅರ್ಧಶತಕ ಪೂರೈಸಿದರು.

5 / 6
ಇದರೊಂದಿಗೆ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಆಝಂ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕೀರನ್ ಪೊಲಾರ್ಡ್ ಹೆಸರಿನಲ್ಲಿತ್ತು. ಪೊಲಾರ್ಡ್ 2023 ರಲ್ಲಿ​ ಡೆಸರ್ಟ್ ವೈಪರ್ಸ್ ವಿರುದ್ಧ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.

6 / 6
ಇದೀಗ ಗಲ್ಫ್ ಜೈಂಟ್ಸ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಆಝಂ ಖಾನ್ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು 20 ಎಸೆತಗಳನ್ನು ಎದುರಿಸಿದ ಆಝಂ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 50 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ 16.5 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಡೆಸರ್ಟ್ ವೈಪರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.