SL vs AFG: ಅಫ್ಘಾನ್ ಹುಡುಗರ ಅಮೋಘ ಪ್ರದರ್ಶನ: ಹಲವು ವಿಶ್ವ ದಾಖಲೆ ಉಡೀಸ್

| Updated By: ಝಾಹಿರ್ ಯೂಸುಫ್

Updated on: Feb 10, 2024 | 9:35 AM

Sri Lanka vs Afghanistan: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ದಾಖಲೆಗಳಲ್ಲಿ ಕೆಲವು ವಿಶ್ವ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಅಫ್ಘಾನಿಸ್ತಾನ್ ಆಟಗಾರರು ನಿರ್ಮಿಸಿರುವ ಹೊಸ ದಾಖಲೆಗಳಾವುವು ಎಂದು ನೋಡೋಣ...

1 / 7
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ವಿರೋಚಿತ ಪ್ರದರ್ಶನ ನೀಡಿದೆ. ಪೆಲ್ಲೆಕಲೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಪರ ಪಾತುಮ್ ನಿಸ್ಸಂಕಾ (210) ಭರ್ಜರಿ ದ್ವಿಶತಕ ಬಾರಿಸಿದ್ದರು. ಈ ಡಬಲ್ ಸೆಂಚುರಿ ನೆರವಿನಿಂದ ಶ್ರೀಲಂಕಾ ತಂಡ ನಿಗದಿತ 50 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 381 ರನ್ ಕಲೆಹಾಕಿತು.

2 / 7
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಅಫ್ಘಾನಿಸ್ತಾನ್ ಪರ ಮೊಹಮ್ಮದ್ ನಬಿ (136) ಮತ್ತು ಅಝ್ಮತುಲ್ಲಾ ಒಮರ್​ಝಾಹಿ (149) ಶತಕ ಸಿಡಿಸಿ ಮಿಂಚಿದ್ದರು. ಇದಾಗ್ಯೂ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿ 42 ರನ್​ಗಳಿಂದ ಸೋಲೊಪ್ಪಿಕೊಂಡಿತು.

3 / 7
ಈ ಸೋಲಿನ ಹೊರತಾಗಿಯೂ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ತಂಡ ಮತ್ತು ಆಟಗಾರರು ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

4 / 7
ಸೋತ ಪಂದ್ಯದಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ವಿಶ್ವ ದಾಖಲೆ ಮೊಹಮ್ಮದ್ ನಬಿ ಮತ್ತು ಅಝ್ಮತುಲ್ಲಾ ಒಮರ್​ಝಾಹಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್ ಮತ್ತು ಗ್ಯಾರಿ ಕರ್ಸ್ಟನ್ ಹೆಸರಿನಲ್ಲಿತ್ತು. ಗಿಬ್ಸ್​-ಗ್ಯಾರಿ ಜೋಡಿ 2000 ರಲ್ಲಿ ಭಾರತದ ವಿರುದ್ಧ 235 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 242 ರನ್​ಗಳ ಜೊತೆಯಾಟದೊಂದಿಗೆ ನಬಿ-ಒಮರ್ ಜೋಡಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

5 / 7
242 ರನ್​ಗಳ ಜೊತೆಯಾಟದೊಂದಿಗೆ 5 ಕ್ಕಿಂತ ಕೆಳ ಕ್ರಮಾಂಕದಲ್ಲಿ ಅತ್ಯಧಿಕ ರನ್ ಪೇರಿಸಿದ 2ನೇ ಜೋಡಿ ಎಂಬ ದಾಖಲೆಯನ್ನು ಕೂಡ ಮೊಹಮ್ಮದ್ ನಬಿ ಮತ್ತು ಅಝ್ಮತುಲ್ಲಾ ಒಮರ್​ಝಾಹಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಗ್ರಾಂಟ್ ಎಲಿಯಟ್ ಮತ್ತು ಲ್ಯೂಕ್ ರೊಂಚಿ ಅಗ್ರಸ್ಥಾನದಲ್ಲಿದ್ದಾರೆ. ನ್ಯೂಝಿಲೆಂಡ್​ನ ಈ ಜೋಡಿ 2015 ರಲ್ಲಿ ಶ್ರೀಲಂಕಾ ವಿರುದ್ಧ 256 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು.

6 / 7
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಅಫ್ಘಾನಿಸ್ತಾನ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ 2015 ರಲ್ಲಿ ಶ್ರೀಲಂಕಾ ವಿರುದ್ಧ ನ್ಯೂಝಿಲೆಂಡ್​ 93 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಬಳಿಕ 267 ರನ್ ಕಲೆಹಾಕಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಶ್ರೀಲಂಕಾ ವಿರುದ್ಧ 55 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಬಳಿಕ ಅಫ್ಘಾನಿಸ್ತಾನ್ ತಂಡ 284 ರನ್​ ಪೇರಿಸಿ ಹೊಸ ಇತಿಹಾಸ ನಿರ್ಮಿಸಿದೆ.

7 / 7
ಈ ಪಂದ್ಯದಲ್ಲಿ 339 ರನ್ ಬಾರಿಸುವ ಮೂಲಕ ಶ್ರೀಲಂಕಾದಲ್ಲಿ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ಅಫ್ಘಾನಿಸ್ತಾನ್ ತಂಡ ಬರೆದಿದೆ. ಹೀಗೆ ಶ್ರೀಲಂಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ಹಲವು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.