AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಪಾಕ್ ತಂಡಕ್ಕೆ ಮತ್ತೆ ಬಾಬರ್ ಆಝಂ ನಾಯಕ

Babar Azam: ಬಾಬರ್ ಆಝಂ ಪಾಕಿಸ್ತಾನ್ ತಂಡವನ್ನು 133 ಪಂದ್ಯಗಳಲ್ಲಿ ಮುನ್ನಡೆಸಿರುವ ಅನುಭವ ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಪಾಕ್ ಪಡೆ 78 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 43 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಅಂದರೆ ಇಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಬಾಬರ್ ಆಝಂ ಉತ್ತಮ ಗೆಲುವಿನ ಶೇಕಡಾವರು ಹೊಂದಿದ್ದಾರೆ,

TV9 Web
| Edited By: |

Updated on:Mar 31, 2024 | 11:39 AM

Share
ಪಾಕಿಸ್ತಾನ್ ತಂಡದ ನಾಯಕನಾಗಿ ಬಾಬರ್ ಆಝಂ (Babar Azam) ಮತ್ತೆ ನೇಮಕವಾಗಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಂಡದ ನಾಯಕನನ್ನು ಬದಲಿಸಿದ್ದು, ಅದರಂತೆ ಇದೀಗ ಬಾಬರ್​ಗೆ ಮತ್ತೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

1 / 5
ಇದಕ್ಕೂ ಮುನ್ನ, 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಹೀನಾಯ ಪ್ರದರ್ಶನ ನೀಡಿತ್ತು. ಈ ಹಿನ್ನಲೆಯಲ್ಲಿ ಬಾಬರ್ ಆಝಂ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಟಿ20 ತಂಡ ಹಾಗೂ ಏಕದಿನ ತಂಡಗಳಿಗೆ ಶಾಹೀನ್ ಅಫ್ರಿದಿಯನ್ನು ಹಾಗೂ ಟೆಸ್ಟ್ ಕ್ರಿಕೆಟ್​ಗೆ ಶಾನ್ ಮಸೂದ್ ಅವರನ್ನು ಹೊಸ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

2 / 5
ಅದರಂತೆ ಶಾಹೀನ್ ಅಫ್ರಿದಿ ನಾಯಕತ್ವದಲ್ಲಿ ನ್ಯೂಝಿಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಿರುವ ಪಾಕಿಸ್ತಾನ್ ತಂಡವು 4-1 ಅಂತರದಿಂದ ಸೋಲನುಭವಿಸಿದೆ. ಇನ್ನು ಶಾನ್ ಮಸೂದ್ ಮುಂದಾಳತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಕ್ ತಂಡವು 3-0 ಅಂತರದಿಂದ ಮುಗ್ಗರಿಸಿಕೊಂಡಿದೆ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನಲ್ಲಿ ಮತ್ತೆ ನಾಯಕತ್ವದ ಬದಲಾವಣೆ ಬಗ್ಗೆ ಕೂಗುಗಳೆದ್ದಿದ್ದವು.

3 / 5
ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷರಾದ ಸೈಯದ್ ಮೊಹ್ಸಿನ್ ರಾಝ ನಖ್ವಿ ಅವರು ಪಾಕ್ ತಂಡದ ನೂತನ ನಾಯಕರಾಗಿ ಬಾಬರ್ ಆಝಂ ಅವರನ್ನು ಮತ್ತೆ ನೇಮಕ ಮಾಡಿದ್ದಾರೆ. ಅದರಂತೆ ಟಿ20 ಮತ್ತು ಏಕದಿನ ತಂಡಗಳನ್ನು ಬಾಬರ್ ಮುನ್ನಡೆಸಲಿದ್ದು, ಟೆಸ್ಟ್ ತಂಡದ ನಾಯಕರಾಗಿ ಶಾನ್ ಮಸೂದ್ ಮುಂದುವರೆಯುವ ಸಾಧ್ಯತೆಯಿದೆ.

4 / 5
ಇತ್ತ ಬಾಬರ್ ಆಝಂ ಪಾಕಿಸ್ತಾನ್ ತಂಡವನ್ನು 133 ಪಂದ್ಯಗಳಲ್ಲಿ ಮುನ್ನಡೆಸಿರುವ ಅನುಭವ ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಪಾಕ್ ಪಡೆ 78 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 43 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಪಾಕಿಸ್ತಾನ್ ತಂಡದ ಯಶಸ್ವಿ ನಾಯಕರಲ್ಲಿ ಬಾಬರ್ ಆಝಂ ಗುರುತಿಸಿಕೊಂಡಿದ್ದಾರೆ. ಇದೇ ಕಾರಣದಿಂದಾಗಿ ಟಿ20 ವಿಶ್ವಕಪ್​ಗೂ ಮುನ್ನ ಮತ್ತೆ ಅವರಿಗೆ ನಾಯಕನ ಸ್ಥಾನ ನೀಡಲಾಗಿದೆ.

5 / 5

Published On - 10:52 am, Sun, 31 March 24

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!

ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್

ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ

ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?