Babar Azam: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಬಾಬರ್ ಆಝಂ

| Updated By: Digi Tech Desk

Updated on: May 16, 2024 | 12:33 PM

Ireland vs Pakistan: ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡ ಜಯ ಸಾಧಿಸಿದೆ. ಇನ್ನು 2ನೇ ಪಂದ್ಯದಲ್ಲಿ ಪಾಕಿಸ್ತಾನ್ ಗೆಲುವು ದಾಖಲಿಸಿದೆ. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಜಯಿಸಲಿದ್ದು, ಈ ಮೂಲಕ ಐರ್ಲೆಂಡ್ ಹೊಸ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

1 / 6
ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ಡಬ್ಲಿನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿತು.

2 / 6
ಈ 194 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ್ ತಂಡವು 16.5 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಿದೆ.

3 / 6
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಉಗಾಂಡಾ ತಂಡದ ನಾಯಕ  ಬ್ರಿಯಾನ್ ಮಸಾಬಾ ಹೆಸರಿನಲ್ಲಿತ್ತು. 56 ಪಂದ್ಯಗಳಲ್ಲಿ ಉಗಾಂಡಾ ತಂಡವನ್ನು ಮುನ್ನಡೆಸಿರುವ ಮಸಾಬಾ 44 ಮ್ಯಾಚ್​ಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಯಶಸ್ವಿಯಾಗಿದ್ದಾರೆ.

4 / 6
ಪಾಕಿಸ್ತಾನ್ ತಂಡವನ್ನು ಈವರೆಗೆ 78 ಪಂದ್ಯಗಳಲ್ಲಿ ಮುನ್ನಡೆಸಿರುವ ಬಾಬರ್ ಆಝಂ ಒಟ್ಟು 45 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಇನ್ನು ಬಾಬರ್ ಹೆಸರಿಗೆ ಸೇರ್ಪಡೆಯಾಗಿರುವ ಈ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶ ರೋಹಿತ್ ಶರ್ಮಾ ಮುಂದಿದೆ.

5 / 6
ಅಂದರೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಸತತ ಗೆಲುವು ಸಾಧಿಸಿದರೆ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರೆನಿಸಿಕೊಳ್ಳಲಿದ್ದಾರೆ. ಭಾರತ ತಂಡವು 54 ಟಿ20 ಪಂದ್ಯಗಳಲ್ಲಿ  ರೋಹಿತ್ ಶರ್ಮಾ ಸಾರಥ್ಯದಲ್ಲಿ ಕಣಕ್ಕಿಳಿದಿದ್ದು, ಈ ವೇಳೆ ಟೀಮ್ ಇಂಡಿಯಾ 42 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ.

6 / 6
ಇನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಬಾಬರ್ ಆಝಂ ಅವರನ್ನು ಹಿಂದಿಕ್ಕಿ ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ಕಪ್ತಾನನಾಗಿ ಹೊರಹೊಮ್ಮಲಿದ್ದಾರೆ. ಹೀಗಾಗಿ ಇಂತಹದೊಂದು ವಿಶ್ವ ದಾಖಲೆಯನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನಿರೀಕ್ಷಿಸಬಹುದು.

Published On - 2:33 pm, Tue, 14 May 24