Updated on: Aug 07, 2023 | 10:08 PM
ಶ್ರೀಲಂಕಾದಲ್ಲಿ ನಡೆದ ಲಂಕಾ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಬಾಬರ್ ಆಝಂ ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
ಗಾಲೆ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೊಲಂಬೊ ಸ್ಟ್ರೈಕರ್ಸ್ ಪರ ಇನಿಂಗ್ಸ್ ಆರಂಭಿಸಿದ ಬಾಬರ್ ಆಝಂ ಕೇವಲ 57 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ 10 ಶತಕ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.
ಈ ದಾಖಲೆ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ದೈತ್ಯ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ. ಗೇಲ್ ಒಟ್ಟು 455 ಟಿ20 ಇನಿಂಗ್ಸ್ಗಳಲ್ಲಿ 22 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದೀಗ 254 ಟಿ20 ಇನಿಂಗ್ಸ್ಗಳಲ್ಲಿ 10 ಶತಕ ಬಾರಿಸಿರುವ ಬಾಬರ್ ಆಝಂ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಗೇಲ್ ಬಳಿಕ ಟಿ20 ಕ್ರಿಕೆಟ್ನಲ್ಲಿ 10 ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಒಟ್ಟು 357 ಟಿ20 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 8 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ಹೊಂದಿದ್ದಾರೆ.
ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಒಟ್ಟು 355 ಟಿ20 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ವಾರ್ನರ್ 8 ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ 376 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 8 ಶತಕ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.