Babar Azam: ಬಾಬರ್ ಅಬ್ಬರಕ್ಕೆ ರೋಹಿತ್ ಶರ್ಮಾರ ದಾಖಲೆ ಬ್ರೇಕ್

New Zealand vs Pakistan: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. 227 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 18 ಓವರ್​​ಗಳಲ್ಲಿ 180 ರನ್​ಗಳಿಸಿ ಆಲೌಟ್ ಆಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 13, 2024 | 6:16 PM

ಆಕ್ಲೆಂಡ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ (Babar Azam) ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಬಾಬರ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 57 ರನ್ ಬಾರಿಸಿ ಮಿಂಚಿದ್ದರು.

1 / 6
ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಆಝಂ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ 2ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದರು.

2 / 6
ಟಿ20 ಕ್ರಿಕೆಟ್​ನಲ್ಲಿ 141 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 29 ಅರ್ಧಶತಕ ಹಾಗೂ 4 ಶತಕಗಳನ್ನು ಬಾರಿಸಿದ್ದರು. ಈ ಮೂಲಕ ಒಟ್ಟು 33 ಬಾರಿ 50+ ಸ್ಕೋರ್​ಗಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಇದೀಗ ಹಿಟ್​ಮ್ಯಾನ್​ರನ್ನು ಹಿಂದಿಕ್ಕಿ ಪಾಕ್ ಆಟಗಾರ ದ್ವಿತೀಯ ಸ್ಥಾನಕ್ಕೇರಿದ್ದಾರೆ.

3 / 6
ಪಾಕಿಸ್ತಾನ್ ಪರ 99 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ 31 ಅರ್ಧಶತಕ ಹಾಗೂ 3 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಟ್ಟು 34 ಬಾರಿ 50+ ಸ್ಕೋರ್​ಗಳಿಸಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಐವತ್ತಕ್ಕಿಂತ ಹೆಚ್ಚು ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ 107 ಟಿ20 ಇನಿಂಗ್ಸ್​ಗಳಲ್ಲಿ 1 ಶತಕ ಹಾಗೂ 37 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 38 ಬಾರಿ 50+ ಸ್ಕೋರ್​ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಬಾಬರ್ ಆಝಂ ಅವರ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. 227 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 18 ಓವರ್​​ಗಳಲ್ಲಿ 180 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಪಾಕ್ ಪಡೆ 46 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

6 / 6

Published On - 11:06 am, Sat, 13 January 24

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್