Babar Azam: ಬಾಬರ್ ಅಬ್ಬರಕ್ಕೆ ರೋಹಿತ್ ಶರ್ಮಾರ ದಾಖಲೆ ಬ್ರೇಕ್
TV9 Web | Updated By: ಝಾಹಿರ್ ಯೂಸುಫ್
Updated on:
Jan 13, 2024 | 6:16 PM
New Zealand vs Pakistan: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. 227 ರನ್ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 18 ಓವರ್ಗಳಲ್ಲಿ 180 ರನ್ಗಳಿಸಿ ಆಲೌಟ್ ಆಗಿದೆ.
1 / 6
ಆಕ್ಲೆಂಡ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ (Babar Azam) ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಬಾಬರ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 57 ರನ್ ಬಾರಿಸಿ ಮಿಂಚಿದ್ದರು.
2 / 6
ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಬಾಬರ್ ಆಝಂ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ 2ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದರು.
3 / 6
ಟಿ20 ಕ್ರಿಕೆಟ್ನಲ್ಲಿ 141 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 29 ಅರ್ಧಶತಕ ಹಾಗೂ 4 ಶತಕಗಳನ್ನು ಬಾರಿಸಿದ್ದರು. ಈ ಮೂಲಕ ಒಟ್ಟು 33 ಬಾರಿ 50+ ಸ್ಕೋರ್ಗಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಇದೀಗ ಹಿಟ್ಮ್ಯಾನ್ರನ್ನು ಹಿಂದಿಕ್ಕಿ ಪಾಕ್ ಆಟಗಾರ ದ್ವಿತೀಯ ಸ್ಥಾನಕ್ಕೇರಿದ್ದಾರೆ.
4 / 6
ಪಾಕಿಸ್ತಾನ್ ಪರ 99 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ 31 ಅರ್ಧಶತಕ ಹಾಗೂ 3 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಟ್ಟು 34 ಬಾರಿ 50+ ಸ್ಕೋರ್ಗಳಿಸಿ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಐವತ್ತಕ್ಕಿಂತ ಹೆಚ್ಚು ರನ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.
5 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ 107 ಟಿ20 ಇನಿಂಗ್ಸ್ಗಳಲ್ಲಿ 1 ಶತಕ ಹಾಗೂ 37 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 38 ಬಾರಿ 50+ ಸ್ಕೋರ್ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
6 / 6
ಬಾಬರ್ ಆಝಂ ಅವರ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. 227 ರನ್ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 18 ಓವರ್ಗಳಲ್ಲಿ 180 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಪಾಕ್ ಪಡೆ 46 ರನ್ಗಳಿಂದ ಸೋಲೊಪ್ಪಿಕೊಂಡಿದೆ.
Published On - 11:06 am, Sat, 13 January 24