ಏಕದಿನ ಕ್ರಿಕೆಟ್ನಲ್ಲಿ ಬಾಬರ್ ಆಝಂ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 6000 ರನ್ ಕಲೆಹಾಕಿದ ವರ್ಲ್ಡ್ ರೆಕಾರ್ಡ್ ಇದೀಗ ಬಾಬರ್ ಪಾಲಾಗಿದೆ.
ಕರಾಚಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 29 ರನ್ ಬಾರಿಸಿದ್ದರು. ಈ 29 ರನ್ಗಳೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಒಡಿಐ ಇತಿಹಾಸದಲ್ಲೇ ಅತೀ ವೇಗವಾಗಿ ಆರು ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಈ ಹಿಂದೆ ವಿರಾಟ್ ಕೊಹ್ಲಿ 136 ಏಕದಿನ ಇನಿಂಗ್ಸ್ಗಳಲ್ಲಿ ಏಕದಿನ ಕ್ರಿಕೆಟ್ನಲ್ಲಿ 6000 ರನ್ ಕಲೆಹಾಕಿದ್ದರು. ಈ ಮೂಲಕ ಅತೀ ವೇಗವಾಗಿ 6 ಸಾವಿರ ರನ್ಗಳ ಗಡಿದಾಟಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದರು. ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಬಾಬರ್ ಆಝಂ ಅಗ್ರಸ್ಥಾನಕ್ಕೇರಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಈವರೆಗೆ 123 ಇನಿಂಗ್ಸ್ ಆಡಿರುವ ಬಾಬರ್ ಆಝಂ 19 ಶತಕ ಹಾಗೂ 34 ಅರ್ಧಶತಕಗಳೊಂದಿಗೆ 6019 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 6000+ ರನ್ ಕಲೆಹಾಕಿದ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅದು ಸಹ ಹಾಶಿಮ್ ಆಮ್ಲಾ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ.
ಸೌತ್ ಆಫ್ರಿಕಾದ ಮಾಜಿ ಆಟಗಾರ ಹಾಶಿಮ್ ಆಮ್ಲಾ 123 ಇನಿಂಗ್ಸ್ಗಳ ಮೂಲಕ ಏಕದಿನ ಕ್ರಿಕೆಟ್ನಲ್ಲಿ 6 ಸಾವಿರ ರನ್ ಕಲೆಹಾಕಿದ್ದರು. ಇದೀಗ ಬಾಬರ್ ಆಝಂ ಕೂಡ ಅಷ್ಟೇ ಇನಿಂಗ್ಸ್ಗಳ ಈ ಮೈಲುಗಲ್ಲನ್ನು ಮುಟ್ಟಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ನಲ್ಲಿ 6000 ರನ್ ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.