ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಒನ್ ಡೇ ಕಪ್ನ 7ನೇ ಪಂದ್ಯದಲ್ಲಿ ಬಾಬರ್ ಆಝಂ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಫೈಸಲಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಸ್ಟಾಲಿನ್ಸ್ ಹಾಗೂ ಪಾಕಿಸ್ತಾನ್ ಡಾಲ್ಫಿನ್ಸ್ ತಂಡಗಳು ಮುಖಾಮುಖಿಯಾಗಿದ್ದವು.