ಬಾಬರ್ ಸೆಂಚುರಿಗೆ ಕಿಂಗ್ ಕೊಹ್ಲಿ ದಾಖಲೆ ಧೂಳೀಪಟ

|

Updated on: Sep 21, 2024 | 11:59 AM

Babar Azam - Virat Kohli: ಚಾಂಪಿಯನ್ಸ್​ ಕಪ್ ಒನ್​ ಡೇ ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

1 / 6
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಒನ್​ ಡೇ ಕಪ್​ನ 7ನೇ ಪಂದ್ಯದಲ್ಲಿ ಬಾಬರ್ ಆಝಂ ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಫೈಸಲಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಸ್ಟಾಲಿನ್ಸ್ ಹಾಗೂ ಪಾಕಿಸ್ತಾನ್ ಡಾಲ್ಫಿನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಟಾಲಿನ್ಸ್ ತಂಡದ ನಾಯಕ ಮೊಹಮ್ಮದ್ ಹ್ಯಾರಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಶುರು ಮಾಡಿದ ಶಾನ್ ಮಸೂದ್ (34) ಹಾಗೂ ಯಾಸಿರ್ ಖಾನ್ (46) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದರು.

3 / 6
ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಬಾಬರ್ ಆಝಂ 100 ಎಸೆತಗಳನ್ನು ಎದುರಿಸಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 104 ರನ್ ಬಾರಿಸಿದರು. ಈ ಮೂಲಕ ಕಳೆದ ಕೆಲ ತಿಂಗಳಿಂದ ಕಳಪೆ ಫಾರ್ಮ್​ನಲ್ಲಿದ್ದ ಪಾಕ್ ನಾಯಕ ಮತ್ತೆ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾದರು. ವಿಶೇಷ ಎಂದರೆ ಈ ಶತಕದೊಂದಿಗೆ ಬಾಬರ್ ಆಝಂ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಲೀಸ್ಟ್ ಎ ದಾಖಲೆಯನ್ನು ಸಹ ಮುರಿದರು.

4 / 6
ಲೀಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 30 ಶತಕಗಳನ್ನು ಬಾರಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 199 ಇನಿಂಗ್ಸ್​ಗಳಲ್ಲಿ 30 ಶತಕ ಸಿಡಿಸಿ ಈ ದಾಖಲೆ ಬರೆದಿದ್ದರು. ಅಲ್ಲದೆ ಲೀಸ್ಟ್ ಎ ಕ್ರಿಕೆಟ್​ನಲ್ಲಿ 200 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ 30 ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

5 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ. ಪಾಕ್ ತಂಡದ ನಾಯಕ ಲೀಸ್ಟ್​ ಎ ಕ್ರಿಕೆಟ್​ನಲ್ಲಿ ಕೇವಲ 180 ಇನಿಂಗ್ಸ್​ಗಳ ಮೂಲಕ 30 ಶತಕ ಪೂರೈಸಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ 200 ಕ್ಕಿಂತ ಕಡಿಮೆ  ಇನಿಂಗ್ಸ್​ಗಳಲ್ಲಿ ಲೀಸ್ಟ್ ಎ ಕ್ರಿಕೆಟ್​ನಲ್ಲಿ 30 ಶತಕ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ಇನ್ನು ಬಾಬರ್ ಆಝಂ ಅವರ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಪಾಕಿಸ್ತಾನ್ ಸ್ಟಾಲಿನ್ಸ್ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 271 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಡಾಲ್ಫಿನ್ಸ್ ತಂಡವು ಕೇವಲ 97 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸ್ಟಾಲಿನ್ಸ್ ತಂಡ 174 ರನ್​ಗಳ ಭರ್ಜರಿ ಜಯ ಸಾಧಿಸಿದೆ.