AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಆಝಂ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯೇ ಧ್ವಂಸ..!

Babar Azam World Record: ಟಿ20 ಕ್ರಿಕೆಟ್​ನಲ್ಲಿ ಬಾಬರ್ ಆಝಂ ಅವರ ದಾಖಲೆಯ ನಾಗಾಲೋಟ ಮುಂದುವರೆದಿದೆ. ಕೆಲ ದಿನಗಳ ಹಿಂದೆಯಷ್ಟೇ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆ ಮುರಿದಿದ್ದ ಬಾಬರ್ ಆಝಂ ಇದೀಗ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 02, 2025 | 9:58 AM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ತಂಡದ ಬಾಬರ್ ಆಝಂ (Babar Azam) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. 

1 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 47 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 68 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 39 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ. ಪಾಕಿಸ್ತಾನ್ ಪರ 124 ಟಿ20 ಇನಿಂಗ್ಸ್ ಆಡಿರುವ ಬಾಬರ್ 40 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಫಿಫ್ಟಿ ಪ್ಲಸ್ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇದಕ್ಕೂ ಮುನ್ನ ಬಾಬರ್ ಆಝಂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು. ರೋಹಿತ್ ಶರ್ಮಾ (4231 ರನ್ಸ್) ಹೆಸರಿನಲ್ಲಿದ್ದ ಈ ವಿಶ್ವ ದಾಖಲೆಯನ್ನು ಮುರಿದು ಇದೀಗ ಬಾಬರ್ ಆಝಂ 4302 ರನ್​ಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್