Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

Babar Azam Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 25 ರನ್ ಆಗುವಷ್ಟರಲ್ಲಿ ಇಬ್ಬರು ಆರಂಭಿಕರು ಪೆವಿಲಿಯನ್​ ಕಡೆ ಮುಖ ಮಾಡಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 30, 2023 | 8:30 PM

ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡುವ ನಿರ್ಧಾರ ಮಾಡಿತು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 25 ರನ್ ಆಗುವಷ್ಟರಲ್ಲಿ ಇಬ್ಬರು ಆರಂಭಿಕರು ಪೆವಿಲಿಯನ್​ ಕಡೆ ಮುಖ ಮಾಡಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕಿದ ಬಾಬರ್ ಅರ್ಧಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 109 ಎಸೆತಗಳಲ್ಲಿ ಶತಕ ಪೂರೈಸಿದರು.

3 / 7
ಭರ್ಜರಿ ಸೆಂಚುರಿ ಬೆನ್ನಲ್ಲೇ ಬಿರುಸಿನ ಆಟಕ್ಕೆ ಮುಂದಾದ ಬಾಬರ್ ಆಝಂ ನೇಪಾಳ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 22 ಎಸೆತಗಳಲ್ಲಿ 50 ರನ್​ಗಳು ಮೂಡಿಬಂತು. ಅಂತಿಮವಾಗಿ 131 ಎಸೆತಗಳನ್ನು ಎದುರಿಸಿದ ಬಾಬರ್ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 7
ಈ 151 ರನ್​ಗಳೊಂದಿಗೆ ಏಷ್ಯಾಕಪ್​ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ನಾಯಕ ಎಂಬ ದಾಖಲೆ ಬಾಬರ್ ಆಝಂ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

5 / 7
2014 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಅಂದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 136 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಬಾಬರ್ ಆಝಂ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 7
ಅಷ್ಟೇ ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲೇ 150+ ಸ್ಕೋರ್​ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೂ ಬಾಬರ್ ಆಝಂ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಒಂದು ಭರ್ಜರಿ ಶತಕದೊಂದಿಗೆ ಬಾಬರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

7 / 7
Follow us