Babar Azam: ವಿಶ್ವ ದಾಖಲೆ ಬರೆದ ಬಾಬರ್: ಈಗ್ಲೂ ಕಿಂಗ್ ಕೊಹ್ಲಿಯೇ ನಂಬರ್ 1

| Updated By: ಝಾಹಿರ್ ಯೂಸುಫ್

Updated on: Jan 14, 2024 | 7:02 AM

Babar Azam Records: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 57 ರನ್​ ಬಾರಿಸುವುದರೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 3500 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3500 ರನ್​ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ಚುಟುಕು ಕ್ರಿಕೆಟ್​ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಹಾಗೂ ಮಾರ್ಟಿನ್ ಗಪ್ಟಿಲ್ ಅವರನ್ನು ಹಿಂದಿಕ್ಕುವ ಮೂಲಕ ದಾಖಲೆ ಬರೆದಿರುವುದು ವಿಶೇಷ.

2 / 6
ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 57 ರನ್​ ಬಾರಿಸುವುದರೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 3500 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3500 ರನ್​ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್​ನ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ 118 ಇನಿಂಗ್ಸ್​ಗಳ ಮೂಲಕ ಗಪ್ಟಿಲ್ 3500 ರನ್ ಪೂರೈಸಿದ್ದರು. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

4 / 6
ಇದೀಗ ಬಾಬರ್ ಆಝಂ 99 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ. 105 ಟಿ20 ಪಂದ್ಯಗಳಲ್ಲಿ 99 ಬಾರಿ ಬ್ಯಾಟ್ ಬೀಸಿರುವ ಬಾಬರ್ 3 ಶತಕ ಹಾಗೂ 31 ಅರ್ಧಶತಕಗಳೊಂದಿಗೆ ಒಟ್ಟು 3542 ರನ್ ಕಲೆಹಾಕಿ ಅತೀ ವೇಗವಾಗಿ 3500+ ರನ್​ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 3500 ರನ್​ ಪೂರೈಸಲು ತೆಗೆದುಕೊಂಡಿದ್ದು ಕೇವಲ 96 ಇನಿಂಗ್ಸ್​​ಗಳನ್ನು ಮಾತ್ರ. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 3500 ರನ್ ಪೂರೈಸಿದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

6 / 6
ಹಾಗೆಯೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಸಾಧಕರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 126 ಇನಿಂಗ್ಸ್​ಗಳ ಮೂಲಕ 3500 ರನ್ ಪೂರೈಸಿರುವ ಹಿಟ್​ಮ್ಯಾನ್, ವಿರಾಟ್ ಕೊಹ್ಲಿ, ಬಾಬರ್ ಆಝಂ ಹಾಗೂ ಮಾರ್ಪಿನ್ ಗಪ್ಟಿಲ್​ ನಂತರದ ಸ್ಥಾನವನ್ನು ಅಲಂಕರಿಸಿದ್ದಾರೆ.