- TV9 Kannada Photo gallery Cricket photos Babar Azam Creates New World Record in International Cricket
ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ
Babar Azam World Record: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈವರೆಗೆ ಯಾರಿಂದಲೂ ಸಾಧ್ಯವಾಗದಂತಹ ಹೊಸ ದಾಖಲೆಯೊಂದನ್ನು ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ನಿರ್ಮಿಸಿದ್ದಾರೆ. ಅದು ಸಹ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರೂ ಸ್ವರೂಪಗಳಲ್ಲಿ (ಟೆಸ್ಟ್, ಒನ್ಡೇ, ಟಿ20) ರನ್ ರಾಶಿ ಪೇರಿಸುವ ಮೂಲಕ..!
Updated on: Aug 05, 2026 | 9:01 AM

ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಪಾಕಿಸ್ತಾನ್ ಟೆಸ್ಟ್ ತಂಡದ ನಾಯಕ ಬಾಬರ್ ಆಝಂ (Babar Azam). ಅದು ಸಹ ಮೂರು ಸ್ವರೂಪಗಳಲ್ಲೂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ. (PC: PCB)

ಟ್ರಿನಿಡಾಡ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಬಾಬರ್ ಆಝಂ 88 ರನ್ ಬಾರಿಸಿ ಮಿಂಚಿದ್ದಾರೆ. ಈ 88 ರನ್ಗಳೊಂದಿಗೆ ಬಾಬರ್ ಟೆಸ್ಟ್ ಕ್ರಿಕೆಟ್ನಲ್ಲಿ 4500+ ರನ್ಗಳ ಗಡಿದಾಟಿದ್ದಾರೆ. ಇದರೊಂದಿಗೆ ಮೂರು ಸ್ವರೂಪಗಳ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 4500+ ರನ್ ಕಲೆಹಾಕಿದ ವಿಶ್ವ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PCB)

ಏಕದಿನ ಕ್ರಿಕೆಟ್ನಲ್ಲಿ 140 ಇನಿಂಗ್ಸ್ ಆಡಿರುವ ಬಾಬರ್ ಆಝಂ 7562 ಎಸೆತಗಳನ್ನು ಎದುರಿಸಿ ಒಟ್ಟು 6626 ರನ್ ಕಲೆಹಾಕಿದ್ದಾರೆ. ಈ ವೇಳೆ 20 ಶತಕ ಹಾಗೂ 38 ಅರ್ಧಶತಕಗಳನ್ನು ಬಾರಿಸಿದ್ದಾರೆ. (PC: PCB)

ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈವರೆಗೆ 136 ಇನಿಂಗ್ಸ್ ಆಡಿರುವ ಬಾಬರ್ ಆಝಂ 3590 ಎಸೆತಗಳನ್ನು ಎದುರಿಸಿ 4596 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PCB)

ಇದೀಗ ಟೆಸ್ಟ್ ಕ್ರಿಕೆಟ್ನಲ್ಲೂ ಹೊಸ ಮೈಲುಗಲ್ಲು ದಾಟಿದ್ದಾರೆ. ಪಾಕ್ ಪರ ಈವರೆಗೆ 117 ಟೆಸ್ಟ್ ಇನಿಂಗ್ಸ್ ಆಡಿರುವ ಬಾಬರ್ ಆಝಂ 4500+ ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ ಇತಿಹಾಸದಲ್ಲೇ ಮೂರು ಸ್ವರೂಪಗಳಲ್ಲೂ 4500+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: PCB)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



