Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದಾಖಲೆಗಳೆಲ್ಲವೂ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಬಾಬರ್ ಆಝಂ

Babar Azam Record: ಟಿ20 ಕ್ರಿಕೆಟ್​ನಲ್ಲಿ ಕ್ರಿಸ್ ಗೇಲ್ ಬಳಿಕ ಅತ್ಯಧಿಕ ಶತಕ ಸಿಡಿಸಿದ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Dec 15, 2024 | 9:53 AM

ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್ ಬರೆದಿದ್ದ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಬಾಬರ್ ಆಝಂ 20 ಎಸೆತಗಳಲ್ಲಿ 1 ಸಿಕ್ಸ್ 3 ಫೋರ್​​ಗಳೊಂದಿಗೆ 31 ರನ್ ಬಾರಿಸಿದ್ದರು. ಈ ಮೂವತ್ತು ರನ್​​ಗಳೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ 300 ಕ್ಕಿಂತ ಕಡಿಮೆ ಇನಿಂಗ್ಸ್​​ಗಳಲ್ಲಿ..!

2 / 6
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ 300 ಕ್ಕಿಂತ ಕಡಿಮೆ ಇನಿಂಗ್ಸ್​ನಲ್ಲಿ 11 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಬಾಬರ್ ಆಝಂ ಪಾಲಾಗಿದೆ. ಹಾಗೆಯೇ ಅತೀ ವೇಗವಾಗಿ 11 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ದಾಂಡಿಗ ಗೇಲ್ 314 ಇನಿಂಗ್ಸ್​​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ.

4 / 6
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 298 ಇನಿಂಗ್ಸ್ ಆಡಿರುವ ಬಾಬರ್ ಆಝಂ 11 ಶತಕ ಹಾಗೂ 90 ಅರ್ಧಶತಕಗಳೊಂದಿಗೆ ಒಟ್ಟು 11020 ರನ್ ಕಲೆಹಾಕಿದ್ದಾರೆ. ಈ ಮೂಲಕ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ 11 ಸಾವಿರ ಪೂರೈಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 337 ಇನಿಂಗ್ಸ್​​ಗಳನ್ನು. ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 330 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ಇವರೆಲ್ಲರನ್ನು ಹಿಂದಿಕ್ಕಿ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 6
Follow us