AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ಪ್ರವಾಸದಲ್ಲಿ ಮೊದಲ ಬಾರಿಗೆ ಎರಡಂಕಿ ಗಡಿ ದಾಟಿದ ಬಾಬರ್

ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಬಾಬರ್ ಆಝಂ ಮೂರು ವರ್ಷಗಳ ನಂತರ ಶತಕದ ಸಮೀಪ ಬಂದರಾದರೂ 76 ರನ್ ಗಳಿಸಿ ಔಟಾದರು. ಸರಣಿಯಲ್ಲೇ ಮೊದಲ ಬಾರಿಗೆ ಎರಡಂಕಿ ದಾಟಿದ ಅವರು, ಶಾನ್ ಮಸೂದ್ (95) ಜೊತೆ ಪಾಕಿಸ್ತಾನದ ಬ್ಯಾಟಿಂಗ್‌ಗೆ ಬಲ ನೀಡಿದರು. ತಂಡ 300+ ರನ್ ಗಳಿಸಿದರೂ ಸೋಲಿನ ಭೀತಿಯಲ್ಲಿದೆ, ಬಾಬರ್ ಕಳಪೆ ಫಾರ್ಮ್‌ನ ಟೀಕೆಗಳಿಗೆ ಉತ್ತರಿಸಿದಂತೆ ಕಂಡಿತು.

ಪೃಥ್ವಿಶಂಕರ
|

Updated on: Sep 11, 2026 | 10:09 PM

Share
ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಪಾಕಿಸ್ತಾನ ನಾಯಕ ಬಾಬರ್ ಆಝಂ ಕೊನೆಗೂ ಎರಡಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಅಲ್ಲದೆ ಬರೋಬ್ಬರಿ ಮೂರು ವರ್ಷಗಳ ಬಳಿಕ ಟೆಸ್ಟ್ ಶತಕಬಾರಿಸುವ ಸಮೀಪಕ್ಕೂ ಬಂದರು. ಆದರೆ ಮತ್ತದೇ ಕಳಪೆ ಶಾಟ್ ಆಡುವ ಮೂಲಕ ಶತಕ ವಂಚಿತರಾದರು(PC-PTI).

1 / 5
ಇಂಗ್ಲೆಂಡ್‌ ಪ್ರವಾಸದಲ್ಲಿ ಪಾಕಿಸ್ತಾನ ತಂಡದ ನಾಯಕತ್ವ ಹೊತ್ತಿರುವ ಬಾಬರ್ ಆಝಂ ಇದುವರೆಗೆ ಆಡಿರುವ 4 ಇನ್ನಿಂಗ್ಸ್​ಗಳಲ್ಲಿ ಇದೇ ಮೊದಲ ಬಾರಿಗೆ ಎರಡಂಕಿ ಮೊತ್ತ ದಾಖಲಿಸಿದ್ದಾರೆ. ಉಳಿದ ಮೂರು ಇನ್ನಿಂಗ್ಸ್​ಗಳಲ್ಲಿ ಬಾಬರ್​ಗೆ 10 ರನ್​ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಇದರ ಫಲವಾಗಿ ತಂಡ ಕೂಡ ಹೀನಾಯವಾಗಿ ಸೋತಿತ್ತು(PC-PTI).

2 / 5
ಇದೀಗ ಸರಣಿಯ ಕೊನೆಯ ಪಂದ್ಯದಲ್ಲೂ ಪಾಕ್ ತಂಡ ಸೋಲಿನ ಆತಂಕದಲ್ಲಿದೆ. ಆದರೆ ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಪಾಕ್ ಬ್ಯಾಟರ್​ಗಳು ಇಂಗ್ಲೆಂಡ್‌ ವೇಗಿಗಳನ್ನು ಸಮರ್ಥವಾಗಿ ಎದುರಿಸುವ ಕೆಲಸ ಮಾಡಿದ್ದಾರೆ. ಈ ಸರಣಿಯಲ್ಲಿ ಪಾಕ್ ತಂಡ ಒಂದೇ ಒಂದು ಇನ್ನಿಂಗ್ಸ್​ನಲ್ಲೂ 200 ರನ್​ಗಳ ಗಡಿ ದಾಟಿರಲಿಲ್ಲ(PC-PTI).

3 / 5
ಆದರೆ ಸರಣಿಯ ಕೊನೆಯ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಪಾಕ್ ತಂಡ 300ರನ್​ಗಳ ಗಡಿ ದಾಟಿದೆ. ತಂಡ ಇಷ್ಟು ಮೊತ್ತ ಕಲೆಹಾಕುವಲ್ಲಿ ನಾಯಕ ಬಾಬರ್ ಜೊತೆಗೆ ಶಾನ್ ಮಸೂದ್ ಅವರ ಕೊಡುಗೆಯೂ ಅಪಾರವಾಗಿತ್ತು. ಶಾನ್ ಮಸೂದ್ 95 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರೆ, ಇತ್ತ ಬಾಬರ್ ಅವರ ಇನ್ನಿಂಗ್ಸ್ ಕೂಡ 76 ರನ್​ಗಳಿಗೆ ಅಂತ್ಯವಾಯಿತು(PC-PTI).

4 / 5
ಇಡೀ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದ ಬಾಬರ್ ಈ ಇನ್ನಿಂಗ್ಸ್​ನಲ್ಲಾದರೂ ಶತಕ ಬಾರಿಸುವ ಭರವಸೆ ಮೂಡಿಸಿದ್ದರು. ಅಲ್ಲದೆ ಅಭಿಮಾನಿಗಳು ಕೂಡ ಬಾಬರ್ ಅವರ 10ನೇ ಟೆಸ್ಟ್ ಶತಕವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಬಾಬರ್ ಕೊನೆಯದಾಗಿ 2022 ರ ಡಿಸೆಂಬರ್​ನಲ್ಲಿ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೊನೆಯ ಟೆಸ್ಟ್ ಶತಕ ಬಾರಿಸಿದ್ದರು. ಅಂದಿನಿಂದ ಬಾಬರ್ ಶತಕಗಳ ಬರ ಎದುರಿಸುತ್ತಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್