Babar Azam: ಕಿಂಗ್ ಕೊಹ್ಲಿಯ ದಾಖಲೆ ಮುರಿದು ಹೊಸ ವಿಶ್ವ ದಾಖಲೆ ಬರೆದ ಬಾಬರ್ ಆಝಂ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್-ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯ ಮೊದಲ ವಾರದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಗಲಿದೆ. ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 01, 2024 | 9:02 AM

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ (Babar Azam) 22 ಎಸೆತಗಳಲ್ಲಿ 36 ರನ್ ಬಾರಿಸಿದ್ದರು. ಈ 36 ರನ್​ಗಳೊಂದಿಗೆ ಪಾಕ್ ತಂಡದ ನಾಯಕ ಟಿ20 ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಈ ಪಂದ್ಯದಲ್ಲಿ 36 ರನ್​ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 639 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 641 ರನ್​ಗಳೊಂದಿಗೆ ಬಾಬರ್ ಆಝಂ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

2 / 6
ಇನ್ನು ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ನಿರ್ಮಿಸಿದ್ದರು.

3 / 6
ವಿರಾಟ್ ಕೊಹ್ಲಿ ಕೇವಲ 107 ಟಿ20 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದರೆ, ಬಾಬರ್ ಆಝಂ ಈ ದಾಖಲೆ ಬರೆಯಲು 112 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಕೂಡ ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಪಾಕ್ ಪರ 81 ಪಂದ್ಯಗಳಲ್ಲಿ ನಾಯಕನಾಗಿ ಬ್ಯಾಟ್ ಬೀಸಿರುವ ಬಾಬರ್ ಒಟ್ಟು 2520 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 2500+ ರನ್ ಕಲೆಹಾಕಿದ ಮೊದಲ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 6
ಇನ್ನು ಈ ಎಲ್ಲಾ ದಾಖಲೆಗಳು ನಿರ್ಮಾಣವಾದ ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು 19.5 ಓವರ್​ಗಳಲ್ಲಿ 157 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಇಂಗ್ಲೆಂಡ್ ತಂಡ 15.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow us