ವಿರಾಟ್ ಕೊಹ್ಲಿಯ ಮತ್ತೊಂದು ವಿಶ್ವ ದಾಖಲೆಯನ್ನ ಸರಿಗಟ್ಟಿದ ಬಾಬರ್ ಆಝಂ

Updated on: Nov 25, 2025 | 9:53 AM

Virat Kohli vs Babar Azam: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 39 ಫಿಫ್ಟಿ ಪ್ಲಸ್ ಸ್ಕೋರ್​ಗಳೊಂದಿಗೆ ಈ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಮುರಿದು ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಅಗ್ರಸ್ಥಾನಕ್ಕೇರಿದ್ದಾರೆ. ಬಾಬರ್ ಈವರೆಗೆ 41 ಬಾರಿ 50+ ಸ್ಕೋರ್​ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5
ಟಿ20 ಕ್ರಿಕೆಟ್​ನಲ್ಲಿ ಬಾಬರ್ ಆಝಂ (Babar Azam) ಅವರ ದಾಖಲೆಗಳ ನಾಗಾಲೋಟ ಮುಂದುವರೆದಿದೆ. ಕೆಲ ದಿನಗಳ ಹಿಂದೆಯಷ್ಟೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ವಿರಾಟ್ ಕೊಹ್ಲಿಯ ದಾಖಲೆ ಮುರಿದಿದ್ದ ಬಾಬರ್ ಇದೀಗ ಮತ್ತೊಂದು ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 5
ರಾವಲ್ಪಿಂಡಿಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 52 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 74 ರನ್ ಬಾರಿಸಿದ್ದಾರೆ. ಈ ಅರ್ಧಶತಕದೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನಕ್ಕೇರಿದ್ದಾರೆ. ಅದು ಕೂಡ ಕೊಹ್ಲಿಯ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

3 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 117 ಟಿ20 ಇನಿಂಗ್ಸ್​ಗಳ ಮೂಲಕ 38 ಅರ್ಧಶತಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇದೀಗ ಈ ದಾಖಲೆಯನ್ನು ಬಾಬರ್ ಆಝಂ ಸರಿಗಟ್ಟಿದ್ದಾರೆ, ಪಾಕಿಸ್ತಾನ್ ಪರ ಈವರೆಗೆ 127 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 38 ಹಾಫ್ ಸೆಂಚುರಿಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 5
ಅಷ್ಟೇ ಅಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದಾರೆ. ಈವರೆಗೆ 127 ಇನಿಂಗ್ಸ್ ಆಡಿರುವ ಬಾಬರ್ 3 ಶತಕ ಹಾಗೂ 38 ಅರ್ಧಶತಕಗಳೊಂದಿಗೆ 4392 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನ ರನ್ ಸರದಾರ ಎನಿಸಿಕೊಂಡಿದ್ದಾರೆ.