ಬಾಬರ್ ಎಂಟ್ರಿಗೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಶೇಕಿಂಗ್
Pakistan vs South Africa T20: ಪಾಕಿಸ್ತಾನ್ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಅ.28) ಶುರುವಾಗಲಿದೆ. ಪಾಕ್ನಲ್ಲಿ ನಡೆಯಲಿರುವ ಈ ಸರಣಿಯ ಮೂಲಕ ಬಾಬರ್ ಆಝಂಗೆ ಹೊಸ ಇತಿಹಾಸ ಬರೆಯುವ ಅವಕಾಶ ಒದಗಿ ಬಂದಿದೆ. ಅದು ಕೂಡ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.
Updated on:Oct 28, 2025 | 9:31 AM

ಬರೋಬ್ಬರಿ ಒಂದು ವರ್ಷದ ಬಳಿಕ ಬಾಬರ್ ಆಝಂ (Babar Azam) ಪಾಕಿಸ್ತಾನ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಬಾಬರ್ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು. ಇತ್ತ ಬಾಬರ್ ಆಝಂ ಕಣಕ್ಕಿಳಿದರೆ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯೊಂದು ಧೂಳೀಪಟವಾಗಲಿದೆ.

ಹೌದು, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬರೆಯಲು ಬಾಬರ್ ಆಝಂಗೆ ಕೇವಲ 9 ರನ್ಗಳ ಅವಶ್ಯಕತೆಯಿದೆ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಬಾಬರ್ ಕೇವಲ 9 ರನ್ಗಳಿಸಿದರೆ ಚುಟುಕು ಕ್ರಿಕೆಟ್ನ ರನ್ ಸರದಾರ ಎನಿಸಿಕೊಳ್ಳಲಿದ್ದಾರೆ.

ಸದ್ಯ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ಪರ 151 ಟಿ20 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಒಟ್ಟು 4231 ರನ್ ಗಳಿಸಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.

ಈ ದಾಖಲೆ ಮುರಿಯಲು ಬಾಬರ್ ಆಝಂಗೆ ಬೇಕಿರುವುದು ಕೇವಲ 9 ರನ್ಗಳು ಮಾತ್ರ. ಪಾಕ್ ಪರ ಈವರೆಗೆ 121 ಟಿ20 ಇನಿಂಗ್ಸ್ ಆಡಿರುವ ಬಾಬರ್ ಒಟ್ಟು 4223 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಪಂದ್ಯಗಳ ಮೂಲಕ ಒಂಬತ್ತು ರನ್ ಗಳಿಸಿದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಪೇರಿಸಿದ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಲಿದೆ.
Published On - 7:54 am, Tue, 28 October 25
