AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ, ಆಮ್ಲ… ಎಲ್ಲರ ದಾಖಲೆ ಮುರಿದ ಬಾಬರ್ ಆಝಂ

ಏಕದಿನ ಕ್ರಿಕೆಟ್​ನಲ್ಲಿ ಪಾಕ್ ಬ್ಯಾಟರ್ ಬಾಬರ್ ಆಝಂ ಅವರ ದಾಖಲೆಯ ಓಟ ಮುಂದುವರಿದಿದೆ. ತಮ್ಮ ಅದ್ಭುತ ಬ್ಯಾಟಿಂಗ್ ಫಾರ್ಮ್ ಮೂಲಕ 141 ಇನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಹೊಸ ವಿಶ್ವ ದಾಖಲೆಯನ್ನು ಬಾಬರ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಆಮ್ಲ ಹಾಗೂ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 19, 2026 | 9:13 AM

Share
ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಏಕದಿನ ಕ್ರಿಕೆಟ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 141 ಇನಿಂಗ್ಸ್​​ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ. ಈ ಭರ್ಜರಿ ಪ್ರದರ್ಶನದೊಂದಿಗೆ ಬಾಬರ್ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಹಾಗೂ ಭಾರತದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.  (PC: Gettyimages)

1 / 5
ಭಾನುವಾರ (ಅ.18) ರಾವಲ್ಪಿಂಡಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಕೇವಲ 57 ಎಸೆತಗಳಲ್ಲಿ 45 ರನ್ ಬಾರಿಸಿದ್ದರು. ಈ ನಲ್ವತ್ತೈದು ರನ್​​ಗಳೊಂದಿಗೆ ಬಾಬರ್ ಏಕದಿನ ಕ್ರಿಕೆಟ್​ನಲ್ಲಿ 141 ಇನಿಂಗ್ಸ್​​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.  (PC: Gettyimages)

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಸೌತ್ ಆಫ್ರಿಕಾ ಪರ 181 ಏಕದಿನ ಪಂದ್ಯಗಳನ್ನಾಡಿರುವ ಹಾಶಿಮ್ 141 ಇನಿಂಗ್ಸ್​ಗಳ ಮೂಲಕ 6,626 ರನ್ ಕಲೆಹಾಕಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ 141 ಇನಿಂಗ್ಸ್​​ಗಳಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.  (PC: Gettyimages)

3 / 5
ಇದಾದ ಬಳಿಕ ಈ ದಾಖಲೆಯ ಸನಿಹಕ್ಕೆ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಬಂದಿದ್ದರು. ಕಿಂಗ್ ಕೊಹ್ಲಿ 141 ಏಕದಿನ ಇನಿಂಗ್ಸ್​ಗಳಲ್ಲಿ 6,224 ರನ್ ಪೇರಿಸಿದರೂ ಹಾಶಿಮ್ ಆಮ್ಲ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗಲಿಲ್ಲ.   (PC: Gettyimages)

4 / 5
ಇದೀಗ ವಿರಾಟ್ ಕೊಹ್ಲಿ ಹಾಗೂ ಹಾಶಿಮ್ ಆಮ್ಲ ಅವರ ದಾಖಲೆಯನ್ನು ಬಾಬರ್ ಆಝಂ ಮುರಿದಿದ್ದಾರೆ. ಈವರೆಗೆ 141 ಏಕದಿನ ಇನಿಂಗ್ಸ್ ಆಡಿರುವ ಬಾಬರ್ ಒಟ್ಟು 6,671 ರನ್ ಕಲೆಹಾಕಿದ್ದಾರೆ. ಈ ಮೂಲಕ 141 ಏಕದಿನ ಇನಿಂಗ್ಸ್​​ಗಳಲ್ಲಿ ಗರಿಷ್ಠ ರನ್ ಪೇರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.   (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us