India vs Pakistan: ನಾಳೆಯ ಪಂದ್ಯಕ್ಕೆ ಅಭಿಮಾನಿಗಳು ನಮಗೆ ಬೆಂಬಲ ನೀಡುತ್ತಾರೆ: ಬಾಬರ್ ಅಝಂ

Babar Azam Press Conference, IND vs PAK: ಏಕದಿನ ವಿಶ್ವಕಪ್​ನಲ್ಲಿ ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಝಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಇಲ್ಲೂ ಅಭಿಮಾನಿಗಳು ನಮಗೆ ಸಪೋರ್ಟ್ ಮಾಡುತ್ತಾರೆ ಎಂದು ಬಾಬರ್ ಹೇಳಿದ್ದಾರೆ.

Vinay Bhat
|

Updated on: Oct 13, 2023 | 4:30 PM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ನಾಳೆ (ಅಕ್ಟೋಬರ್ 14) ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣೆಸಾಟ ನಡೆಸಲಿದೆ.

1 / 7
ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಝಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮುಖ್ಯವಾಗಿ ಇಲ್ಲೂ ಅಭಿಮಾನಿಗಳು ನಮಗೆ ಸಪೋರ್ಟ್ ಮಾಡುತ್ತಾರೆ ಎಂದು ಬಾಬರ್ ಹೇಳಿದ್ದಾರೆ.

2 / 7
ಭಾರತ ಹಾಗೂ ಪಾಕಿಸ್ತಾನ ಪಂದ್ಯದಲ್ಲಿ ಹಿಂದೆ ಏನಾಯಿತು ಎಂಬುದು ಮುಖ್ಯವಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಈಗ ಏನಿದೆ ಅದರ ಕಡೆಗೆ ಮಾತ್ರ ಗಮನ ಹರಿಸುತ್ತೇವೆ. ನಾವು ಈ ಬಾರಿ ಚೆನ್ನಾಗಿ ಆಡುತ್ತೇವೆ. ಭಾರತ-ಪಾಕಿಸ್ತಾನ ಪಂದ್ಯ ಎಂದ ಮೇಲೆ ಹೆಚ್ಚು ಕುತೀಹಲದಿಂದ ಕೂಡಿರುತ್ತದೆ. ಸಾಕಷ್ಟು ಅಭಿಮಾನಿಗಳು ಬರುತ್ತಾರೆ ಎಂಬುದು ಬಾಬರ್ ಮಾತು.

3 / 7
ಅಭಿಮಾನಿಗಳ ಮುಂದೆ ಉತ್ತಮ ಪ್ರದರ್ಶನ ನೀಡಲು ನಮಗೆ ಇದೊಂದು ಉತ್ತಮ ಅವಕಾಶವಾಗಿದೆ. ಇಲ್ಲಿ ಮೊದಲ 10 ಓವರ್‌ಗಳಲ್ಲಿ ವಿಕೆಟ್ ವಿಭಿನ್ನವಾಗಿರುತ್ತದೆ. ಮತ್ತು ನಂತರದ 10 ಓವರ್‌ಗಳಲ್ಲಿ ವಿಕೆಟ್ ಬೇರೆರೀತಿ ಇರುತ್ತದೆ. ಆದ್ದರಿಂದ, ನಾವು ಅದಕ್ಕೆ ತಕ್ಕಂತೆ ಯೋಜನೆ ರೂಪಿಸಬೇಕು- ಬಾಬರ್ ಅಝಂ.

4 / 7
ನಾವು ಪ್ರಮುಖ ಬೌಲರ್ ನಸೀಮ್ ಷಾ ಅವರನ್ನು ಕಳೆದುಕೊಂಡಿದ್ದೇವೆ. ಶಾಹೀನ್ ಅಫ್ರಿದಿ ನಮ್ಮ ಅತ್ಯುತ್ತಮ ಬೌಲರ್. ಅವರ ಮೇಲೆ ಸಾಕಷ್ಟು ನಂಬಿಕೆ ಇದೆ. ಇದು ನಮಗೆ ಒತ್ತಡದ ಪಂದ್ಯವಲ್ಲ. ನಾವು ಪರಸ್ಪರ ಸಾಕಷ್ಟು ಪಂದ್ಯವನ್ನು ಆಡಿದ್ದೇವೆ. ಹೈದರಾಬಾದ್‌ನಲ್ಲಿ ನಮಗೆ ಒಳ್ಳೆಯ ಬೆಂಬಲ ಸಿಕ್ಕಿತು. ಅದೇರೀತಿ ಅಹಮದಾಬಾದ್‌ನಲ್ಲೂ ನಮಗೆ ಬೆಂಬಲ ನೀಡುತ್ತಾರೆ ಎಂದು ಭಾವಿಸುತ್ತೇವೆ ಎಂಬುದು ಬಾಬರ್ ಮಾತು.

5 / 7
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮವಾಗಿ ಆಡುವ ಭರವಸೆ ಇದೆ. 2021 ರಲ್ಲಿ ನಾವು T20 ವಿಶ್ವಕಪ್​ನಲ್ಲಿ ಭಾರತವನ್ನು ಸೋಲಿಸಿದ್ದೇವೆ. ನಾವು ಅದನ್ನು ಇಲ್ಲಿಯೂ ಮಾಡಬಹುದು ಎಂಬ ನಂಬಿಕೆಯಿದೆ. ನಾನು ಈ ವಿಶ್ವಕಪ್‌ನಲ್ಲಿ ಹೆಚ್ಚು ರನ್ ಗಳಿಸಿಲ್ಲ. ಆದರೆ, ಭಾರತ ವಿರುದ್ಧ ಇದು ಬದಲಾಗುತ್ತದೆ ಎಂದು ಭಾವಿಸುತ್ತೇವೆ ಎಂದು ಬಾಬರ್ ಹೇಳಿದ್ದಾರೆ.

6 / 7
ಭಾರತ-ಪಾಕಿಸ್ತಾನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ದೇಶದ ಸ್ಟಾರ್ ಕಲಾವಿದರ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದ್ದು, 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯವನ್ನು ವೀಕ್ಷಿಸಲು ದೇಶದ ಹಲವು ದೊಡ್ಡ ಕಲಾವಿದರು, ರಾಜಕಾರಣಿಗಳೂ ಆಗಮಿಸಲಿದ್ದಾರೆ.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್