Babar Azam: ಮೂರು ಶ್ರೇಯಾಂಕ ಪಟ್ಟಿಯಲ್ಲೂ ಬಾಬರ್ ಆಝಂ ಮಿಂಚಿಂಗ್
TV9 Web | Updated By: ಝಾಹಿರ್ ಯೂಸುಫ್
Updated on:
Feb 01, 2024 | 10:09 AM
Babar Azam: ಐಸಿಸಿ ಪ್ರಕಟಿಸಿರುವ ಮೂರು ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಟೆಸ್ಟ್ ರ್ಯಾಂಕಿಂಗ್ನಲ್ಲಿ 5 ಸ್ಥಾನದಲ್ಲಿರುವ ಬಾಬರ್ ಏಕದಿನ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್-1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
1 / 6
ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿರುವ ನೂತನ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಉತ್ತಮ ಸಾಧನೆ ಮಾಡಿದ್ದಾರೆ. ಅದು ಕೂಡ ಮೂರು ಸ್ವರೂಪಗಳಲ್ಲೂ ಟಾಪ್-5 ನಲ್ಲಿ ಸ್ಥಾನ ಪಡೆಯುವ ಮೂಲಕ ಎಂಬುದು ವಿಶೇಷ.
2 / 6
ಅಂದರೆ ಐಸಿಸಿ ಬಿಡುಗಡೆ ಮಾಡಿರುವ ಮೂರು ಸ್ವರೂಪಗಳ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಬ್ಯಾಟರ್ ಆಗಿ ಬಾಬರ್ ಹೊರಹೊಮ್ಮಿದ್ದಾರೆ. ಬಾಬರ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಮೂರು ಮಾದರಿಯ (ಟಿ20, ಟೆಸ್ಟ್ ಮತ್ತು ಏಕದಿನ) ರ್ಯಾಂಕಿಂಗ್ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿಲ್ಲ.
3 / 6
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್ ಆಝಂ ಇದೀಗ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.
4 / 6
ಇನ್ನು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬಾಬರ್ ಆಝಂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದೀಗ ಟಿ20 ಶ್ರೇಯಾಂಕದಲ್ಲೂ ಜಿಗಿತ ಕಂಡಿರುವ ಬಾಬರ್ 4ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.
5 / 6
ಹಾಗೆಯೇ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ. ಈ ಮೂಲಕ ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿಯಲ್ಲಿ (ಟಿ20, ಏಕದಿನ, ಟೆಸ್ಟ್) ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರನಾಗಿ ಬಾಬರ್ ಆಝಂ ಹೊರಹೊಮ್ಮಿದ್ದಾರೆ.
6 / 6
ಇನ್ನು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 6ನೇ ಸ್ಥಾನ ಅಲಂಕರಿಸಿದ್ದರೆ, ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಹೊಸ ಶ್ರೇಯಾಂಕ ಪಟ್ಟಿಯ 2 ವಿಭಾಗಗಳಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.