ಸೋತು ಸುಣ್ಣವಾದ ಪಾಕ್ ಪಡೆ: ಮತ್ತೆ ಬಾಬರ್ ಆಝಂ ತಲೆದಂಡ..!

|

Updated on: Sep 07, 2024 | 9:13 AM

Babar Azam: Babar Azam: ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ವರೆಗೂ ಪಾಕಿಸ್ತಾನ್ ತಂಡದ ನಾಯಕರಾಗಿ ಬಾಬರ್ ಆಝಂ ಕಾಣಿಸಿಕೊಂಡಿದ್ದರು. ಆದರೆ ವಿಶ್ವಕಪ್​ನಲ್ಲಿನ ಹೀನಾಯ ಪ್ರದರ್ಶನಕ್ಕೆ ತಲೆದಂಡವಾಗಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಆ ಬಳಿಕ ಟಿ20 ವಿಶ್ವಕಪ್​ಗೆ ಅವರನ್ನು ಮತ್ತೆ ನಾಯಕನಾಗಿ ನೇಮಿಸಲಾಗಿತ್ತು.

1 / 6
ಪಾಕಿಸ್ತಾನ್ ತಂಡದ ನಾಯಕತ್ವದಿಂದ ಬಾಬರ್ ಆಝಂ ಅವರ ತಲೆದಂಡವಾಗುವುದು ಬಹುತೇಕ ಖಚಿತ. ಏಕೆಂದರೆ ಪಾಕ್​ನಲ್ಲಿ ನಡೆಯಲಿರುವ ದೇಶಿ ಚಾಂಪಿಯನ್ಸ್ ಕಪ್ ಟೂರ್ನಿಗೆ ಆಯ್ಕೆ ಮಾಡಲಾದ ತಂಡಗಳಲ್ಲಿ ಬಾಬರ್​ಗೆ ನಾಯಕತ್ವ ನೀಡಲಾಗಿಲ್ಲ. ಹೀಗಾಗಿ ಮುಂಬರುವ ಸರಣಿಗೂ ಮುನ್ನ ಪಾಕಿಸ್ತಾನ್ ಸೀಮಿತ ಓವರ್​ಗಳ ತಂಡಗಳ ನಾಯಕ ಬದಲಾಗಲಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.

2 / 6
ಇದಕ್ಕೂ ಮುನ್ನ, 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಹೀನಾಯ ಪ್ರದರ್ಶನ ನೀಡಿತ್ತು. ಈ ಹಿನ್ನಲೆಯಲ್ಲಿ ಬಾಬರ್ ಆಝಂ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಟಿ20 ತಂಡ ಹಾಗೂ ಏಕದಿನ ತಂಡಗಳಿಗೆ ಶಾಹೀನ್ ಅಫ್ರಿದಿಯನ್ನು ಹಾಗೂ ಟೆಸ್ಟ್ ಕ್ರಿಕೆಟ್​ಗೆ ಶಾನ್ ಮಸೂದ್ ಅವರನ್ನು ಹೊಸ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

3 / 6
ಅದರಂತೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶಾಹೀನ್ ಅಫ್ರಿದಿ ನಾಯಕತ್ವದಲ್ಲಿ ಕಣಕ್ಕಿಳಿದ ಪಾಕಿಸ್ತಾನ್ ತಂಡವು 4-1 ಅಂತರದಿಂದ ಸೋಲನುಭವಿಸಿತ್ತು. ಇದರ ಬೆನ್ನಲ್ಲೇ ಶಾಹೀನ್ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಬಾಬರ್ ಆಝಂ ಅವರನ್ನು ಮತ್ತೆ ನಾಯಕನಾಗಿ ನೇಮಿಸಲಾಯಿತು.

4 / 6
ಟಿ20 ವಿಶ್ವಕಪ್​ನಲ್ಲಿ ಬಾಬರ್ ಆಝಂ ಮುಂದಾಳತ್ವದಲ್ಲಿ ಕಣಕ್ಕಿಳಿದ ಪಾಕ್ ಪಡೆಯು ಯುಎಸ್​ಎ ವಿರುದ್ದ ಪರಾಜಯಗೊಳ್ಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಲ್ಲದೆ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದರು. ಹೀಗಾಗಿ ಇದೀಗ ಬಾಬರ್ ಆಝಂ ಅವರನ್ನು ನಾಯಕತ್ವದಿಂದ ಕೆಳಗಿಳಿಸಲು ಪಾಕ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ.

5 / 6
ಪ್ರಸ್ತುತ ಮಾಹಿತಿ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಪಾಕಿಸ್ತಾನ್ ತಂಡದ ನಾಯಕ ಬದಲಾಗುವುದು ಖಚಿತ. ಇಲ್ಲಿ ಬಾಬರ್ ಆಝಂ ಸ್ಥಾನದಲ್ಲಿ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪಾಕಿಸ್ತಾನ್ ಸೂಪರ್ ಲೀಗ್ ಹಾಗೂ ಚಾಂಪಿಯನ್ಸ್​ ಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸಿರುವ ಅನುಭವ ಹೊಂದಿರುವ ರಿಝ್ವಾನ್ ನಾಯಕತ್ವದ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರಿಗೆ ಕ್ಯಾಪ್ಟನ್ ಪಟ್ಟ ಸಿಗುವ ಸಾಧ್ಯತೆಯಿದೆ.

6 / 6
ಬಾಬರ್ ಆಝಂ ಪಾಕಿಸ್ತಾನ್ ತಂಡವನ್ನು 147 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಪಾಕ್ ಪಡೆ 83 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 50 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು 4 ಪಂದ್ಯಗಳು ಡ್ರಾ ಆದರೆ, 2 ಮ್ಯಾಚ್​ಗಳು ಟೈ ಆಗಿತ್ತು. ಹಾಗೆಯೇ 8 ಪಂದ್ಯಗಳು ಫಲಿತಾಂಶರಹಿತವಾಗಿ ಕೊನೆಗೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಬಾಬರ್ ಆಝಂ ಪಾಕಿಸ್ತಾನ್ ತಂಡದ ಯಶಸ್ವಿ ನಾಯಕರಲ್ಲಿ ಗುರುತಿಸಿಕೊಂಡಿದ್ದಾರೆ. ಇದಾಗ್ಯೂ ಅವರ ನಾಯಕತ್ವದಲ್ಲಿ ಪಾಕಿಸ್ತಾನ್ ತಂಡವು ಈವರೆಗೆ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಾಯಕತ್ವ ಬದಲಿಸಲು ಪಿಸಿಬಿ ಮುಂದಾಗಿದೆ.

Published On - 9:10 am, Sat, 7 September 24