AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ನೆಲದಲ್ಲಿ ಒಂದಂಕಿ ದಾಟದ ಬಾಬರ್ ಆಝಂ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ನಾಯಕ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಮೂರನೇ ಟೆಸ್ಟ್‌ನಲ್ಲೂ 7 ರನ್‌ಗಳಿಗೆ ಔಟಾಗುವ ಮೂಲಕ ತಂಡದ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣರಾದರು. ಸತತ ಮೂರು ಇನ್ನಿಂಗ್ಸ್‌ಗಳಲ್ಲಿ ಒಂದಂಕಿ ದಾಟಲು ವಿಫಲರಾದರು. ಸರಣಿಯುದ್ದಕ್ಕೂ ಪಾಕಿಸ್ತಾನ 200 ರನ್ ಗಡಿ ದಾಟಿಲ್ಲ, 2-0 ಹಿನ್ನಡೆಯಲ್ಲಿರುವ ತಂಡದ ಭವಿಷ್ಯ ಕಳವಳಕಾರಿಯಾಗಿದೆ.

ಪೃಥ್ವಿಶಂಕರ
|

Updated on: Sep 09, 2026 | 9:41 PM

Share
ಇಂಗ್ಲೆಂಡ್ ಪ್ರವಾಸ ಪಾಕಿಸ್ತಾನ ಟೆಸ್ಟ್ ನಾಯಕ ಬಾಬರ್ ಆಝಂ ದುಃಸ್ವಪ್ನದಂತೆ ಕಾಡುತ್ತಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಂದು ಪಾಕಿಸ್ತಾನದ ಬ್ಯಾಟಿಂಗ್ ಮತ್ತೊಮ್ಮೆ ವಿಫಲವಾತಯಿತು. ಪರಿಣಾಮವಾಗಿ ಇಡೀ ತಂಡ ಕೇವಲ 133 ರನ್​ಗಳಿಗೆ ಆಲೌಟ್ ಆಯಿತು. ನಾಯಕ ಬಾಬರ್ ಆಝಂ ಕೂಡ ಕೇವಲ 7 ರನ್​ಗೆ ಔಟಾಗುವ ಮೂಲಕ ತಂಡದ ಪತನಕ್ಕೆ ಕಾರಣರಾದರು.

1 / 5
ವಾಸ್ತವವಾಗಿ ಬಾಬರ್ ಆಝಂ ಸತತ ಮೂರನೇ ಇನ್ನಿಂಗ್ಸ್​ನಲ್ಲಿ ಒಂದಂಕಿ ಗಡಿ ದಾಟುವಲ್ಲಿ ವಿಫಲರಾದರು. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಬರ್ ಆಝಂ ಆಡಿರಲಿಲ್ಲ. ಆ ಪಂದ್ಯದಲ್ಲೂ ತಂಡ ಸೋತಿತು. ಎರಡನೇ ಪಂದ್ಯದಲ್ಲಿ ತಂಡಕ್ಕೆ ಮರಳಿದ ಬಾಬರ್, ಆ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 8 ರನ್ ಬಾರಿಸಿದ್ದ ಬಾಬರ್, 2ನೇ ಇನ್ನಿಂಗ್ಸ್​ನಲ್ಲಿ ಕೇವಲ 7 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

2 / 5
ಬಾಬರ್ ಆಗಮನದ ಹೊರತಾಗಿಯೂ ಪಾಕಿಸ್ತಾನ ತಂಡ ಎರಡನೇ ಟೆಸ್ಟ್​ನಲ್ಲೂ 194 ರನ್​ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ತೀರ ಕಳಪೆಯಾಗಿದೆ. ಈ ಇಡೀ ಸರಣಿಯಲ್ಲಿ ಪಾಕ್ ತಂಡ 200 ರನ್​ಗಳ ಗಡಿ ದಾಟಿಲ್ಲ. ಪಾಕ್ ತಂಡ ಇಂಗ್ಲೆಂಡ್‌ ಪ್ರವಾಸದಲ್ಲಿ ಎಲ್ಲಾ ವಿಭಾಗದಲ್ಲೂ ವಿಫಲವಾಗಿದೆ.

3 / 5
ಮೂರನೇ ಟೆಸ್ಟ್ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬಂದ ಬಾಬರ್ ಆಝಂ 18 ಎಸೆತಗಳನ್ನು ಎದುರಿಸಿ ಕೇವಲ ಏಳು ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಬಾರಿಸಲಷ್ಟೇ ಶಕ್ತರಾದ ಬಾಬರ್,  ಜೋಶ್ ಟಂಗ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

4 / 5
ಸರಣಿಯಲ್ಲಿ ಈಗಾಗಲೇ 2-0 ಹಿನ್ನಡೆಯಲ್ಲಿರುವ ಪಾಕಿಸ್ತಾನ ಈ ಸರಣಿಯಲ್ಲಿ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ಬದಲಾಗಲಿಲ್ಲ. ಈ ಪಂದ್ಯಕ್ಕಾಗಿ ಪಾಕ್ ತಂಡದಲ್ಲಿ 4 ಬದಲಾವಣೆಗಳನ್ನು ಮಾಡಲಾಗಿದೆಯಾದರೂ ಯಾರ ಪ್ರದರ್ಶನವೂ ಉತ್ತಮವಾಗಿಲ್ಲ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್

ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ

ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ