- Kannada News Photo gallery Cricket photos Babar Azam pokes at Virat Kohli after Australia beat India
Virat Kohli vs Babar Azam: ವಿರಾಟ್ ಕೊಹ್ಲಿಗೆ ತಿರುಗೇಟು ನೀಡಿದ ಬಾಬರ್ ಆಝಂ
Virat Kohli vs Babar Azam: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಅಮೋಘ ಗೆಲುವಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
Updated on:Jun 12, 2023 | 10:54 PM

ಲಂಡನ್ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಅಮೋಘ ಗೆಲುವಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಹೀಗೆ ಅಭಿನಂದನೆ ಸಲ್ಲಿಸಿದ ಪಟ್ಟಿಯಲ್ಲಿ ಮಾಜಿ ಹಾಗೂ ಹಾಲಿ ಕ್ರಿಕೆಟಿಗರಿದ್ದಾರೆ. ಆದರೆ ಇವೆಲ್ಲರ ನಡುವೆ ಎಲ್ಲರ ಗಮನ ಸೆಳೆದಿದ್ದು ಬಾಬರ್ ಆಝಂ ಅವರ ಅಭಿನಂದನೆ.

ಅತ್ತ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಅಭಿನಂದನೆ ಸಲ್ಲಿಸಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ನಲ್ಲಿ ಅಭಿನಂದನೆಗಳು ಆಸ್ಟ್ರೇಲಿಯಾ...ಇದು ಅರ್ಹ ಗೆಲುವು ಎಂಬಾರ್ಥದಲ್ಲಿ ಬರೆದುಕೊಂಡಿದ್ದರು.

ವಿಶೇಷ ಎಂದರೆ ಇದಕ್ಕೂ ಮುನ್ನ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೋತಾಗ, ಇಂಗ್ಲೆಂಡ್ ತಂಡಕ್ಕೆ ಅಭಿನಂದನೆ ಸಲ್ಲಿಸಿ ವಿರಾಟ್ ಕೊಹ್ಲಿ ಕೂಡ ಇದೇ ಮಾದರಿಯಲ್ಲಿ ಪೋಸ್ಟ್ ಹಾಕಿದ್ದರು.

ಇದೀಗ ಕೊಹ್ಲಿ ಪೋಸ್ಟ್ನ ಬರಹವನ್ನೇ ಉಲ್ಲೇಖಿಸಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಆಸ್ಟ್ರೇಲಿಯಾ ತಂಡವನ್ನು ಅಭಿನಂದಿಸಿದ್ದಾರೆ.

ಅಂದರೆ ಈ ಹಿಂದೆ ಪಾಕಿಸ್ತಾನ್ ವಿರುದ್ಧ ಇಂಗ್ಲೆಂಡ್ ಗೆದ್ದಾಗ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸಿದ ರೀತಿಯಲ್ಲೇ ಇದೀಗ ಟೀಮ್ ಇಂಡಿಯಾ ವಿರುದ್ಧದ ಆಸ್ಟ್ರೇಲಿಯಾ ಗೆಲುವಿಗೆ ಬಾಬರ್ ಆಝಂ ಅಭಿನಂದನೆ ಸಲ್ಲಿಸಿ ತಿರುಗೇಟು ನೀಡಿದ್ದಾರೆ.
Published On - 10:54 pm, Mon, 12 June 23



















