AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ವಿಶ್ವಕಪ್​ನಲ್ಲಿ ಅತೀ ನಿಧಾನವಾಗಿ ಬ್ಯಾಟ್ ಬೀಸುವ ಮೂಲಕ. ಈ ದಾಖಲೆಯೊಂದಿಗೆ ಪಾಕ್ ತಂಡದ ಮಾಜಿ ಆಟಗಾರನ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 25, 2026 | 7:41 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..!

1 / 5
ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 24 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 25 ರನ್​ಗಳು ಮಾತ್ರ. ಈ 25 ರನ್​ಗಳೊಂದಿಗೆ ವಿಶ್ವಕಪ್​ ಇತಿಹಾಸದಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್​ ಎಂಬ ಅನಗತ್ಯ ದಾಖಲೆಯೊಂದನ್ನು ಬಾಬರ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಂದರೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕನಿಷ್ಠ 500 ರನ್​ಗಳಿಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಬ್ಯಾಟರ್ ಬಾಬರ್. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಝ್ ಹೆಸರಿನಲ್ಲಿತ್ತು.

3 / 5
ಟಿ20 ವಿಶ್ವಕಪ್​ನಲ್ಲಿ 27 ಇನಿಂಗ್ಸ್ ಆಡಿರುವ ಮೊಹಮ್ಮದ್ ಹಫೀಝ್ 457 ಎಸೆತಗಳಲ್ಲಿ ಕಲೆಹಾಕಿರುವ ಒಟ್ಟು ರನ್ 511  ಮಾತ್ರ. ಅಂದರೆ 111.8ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ಹೀನಾಯ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಈವರೆಗೆ 21 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 640 ರನ್​ ಕಲೆಹಾಕಿದ್ದಾರೆ. ಈ 640 ರನ್​ಗಳಿಸಲು ಅವರು ತೆಗೆದುಕೊಂಡಿರುವುದು ಬರೋಬ್ಬರಿ 574 ಎಸೆತಗಳನ್ನು ಎಂಬುದು ವಿಶೇಷ. ಅಂದರೆ ಕೇವಲ 111.5 ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ