ಬಾಬರ್ ಆಝಂ ಪಾಕಿಸ್ತಾನ್ ತಂಡವನ್ನು 147 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಪಾಕ್ ಪಡೆ 83 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 50 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು 4 ಪಂದ್ಯಗಳು ಡ್ರಾ ಆದರೆ, 2 ಮ್ಯಾಚ್ಗಳು ಟೈ ಆಗಿತ್ತು. ಹಾಗೆಯೇ 8 ಪಂದ್ಯಗಳು ಫಲಿತಾಂಶರಹಿತವಾಗಿ ಕೊನೆಗೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಬಾಬರ್ ಆಝಂ ಪಾಕಿಸ್ತಾನ್ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರು. ಇದಾಗ್ಯೂ ಅವರ ನಾಯಕತ್ವದಲ್ಲಿ ಪಾಕಿಸ್ತಾನ್ ತಂಡವು ಈವರೆಗೆ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಾಯಕತ್ವ ಬದಲಿಸಲು ಪಿಸಿಬಿ ಮುಂದಾಗಿದೆ.