Updated on: Oct 08, 2022 | 9:19 PM
ನ್ಯೂಜಿಲೆಂಡ್ ವಿರುದ್ಧದ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅರ್ದಶತಕ ಸಿಡಿಸಿದ್ದು, ಈ ಮೂಲಕ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆಯನ್ನು ಸರಿಗಟ್ಟಿದ್ದಾರೆ.
ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 28 ಅರ್ಧಶತಕಗಳನ್ನು ಗಳಿಸಿರುವ ಬಾಬರ್, ಈಗ ಕೊಹ್ಲಿಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನದ ನಾಯಕ 84 ಇನ್ನಿಂಗ್ಸ್‌ಗಳಲ್ಲಿ 28 ಅಂತರಾಷ್ಟ್ರೀಯ ಟಿ20 ಅರ್ಧಶತಕಗಳನ್ನು ಪೂರೈಸಿದ್ದಾರೆ.
ಬಾಬರ್ ನ್ಯೂಜಿಲೆಂಡ್ ವಿರುದ್ಧ 53 ಎಸೆತಗಳಲ್ಲಿ ಅಜೇಯ 79 ರನ್ ಗಳಿಸಿದರು. ಬಿರುಸಿನ ಬ್ಯಾಟಿಂಗ್ ಮಾಡಿದ ಬಾಬರ್ ತಮ್ಮ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳನ್ನು ಹೊಡೆದರು. ಈ ಪಂದ್ಯವನ್ನು ಪಾಕಿಸ್ತಾನ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.
ಈ ತ್ರಿಕೋನ ಸರಣಿಯ ಬಳಿಕ ಪಾಕಿಸ್ತಾನ ತಂಡ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ಹಾರಲಿದ್ದು, ಬಾಬರ್ ಪಡೆ ಅಕ್ಟೋಬರ್ 23 ರಂದು ಭಾರತದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ.
ಕಳೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.