BAN vs SA: ರಬಾಡ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ; ತವರಿನಲ್ಲಿ 7ನೇ ಬಾರಿಗೆ ಅತ್ಯಲ್ಪ ಮೊತ್ತಕ್ಕೆ ಆಲೌಟ್

|

Updated on: Oct 21, 2024 | 4:44 PM

BAN vs SA: ಪ್ರಸ್ತುತ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಅದರಂತೆ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದ್ದು, ಅಕ್ಟೋಬರ್ 21 ರಿಂದ ಶೇರ್ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ತವರಿನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಬೇಡದ ದಾಖಲೆ ಬರೆದಿದೆ.

1 / 7
ಟೀಂ ಇಂಡಿಯಾ ವಿರುದ್ಧ ನಡೆದ ಎರಡು ಟೆಸ್ಟ್ ಪಂದ್ಯಗಳನ್ನು ಸೋತು ತಾಯ್ನಾಡಿಗೆ ವಾಪಸ್ಸಾಗಿದ್ದ ಬಾಂಗ್ಲಾದೇಶ ತಂಡ ಇದೀಗ ದಕ್ಷಿಣ ಆಫ್ರಿಕಾ ತಂಡಕ್ಕೆ ಆತಿಥ್ಯವಹಿಸುತ್ತಿದೆ. ಅದರಂತೆ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದ್ದು, ಅಕ್ಟೋಬರ್ 21 ರಿಂದ ಶೇರ್ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ತವರಿನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಬೇಡದ ದಾಖಲೆ ಬರೆದಿದೆ.

2 / 7
ಮೊದಲ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 106 ರನ್​ಗಳಿಗೆ ಆಲೌಟ್ ಆಗಿದೆ. ಆಫ್ರಿಕನ್ ವೇಗದ ಬೌಲರ್ ಕಗಿಸೊ ರಬಾಡ ಅವರ ಮಾರಕ ಬೌಲಿಂಗ್ ದಾಳಿಗೆ ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗ ಪೆವಿಲಿಯನ್ ಪರೇಡ್ ನಡೆಸಿತು. ಇದರೊಂದಿಗೆ ಬಾಂಗ್ಲಾದೇಶ ತಂಡ ತನ್ನ ಹೆಸರಿನಲ್ಲಿ ನಾಚಿಕೆಗೇಡಿನ ದಾಖಲೆಯೊಂದನ್ನು ಬರೆದುಕೊಂಡಿದೆ.

3 / 7
ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 106 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬಾಂಗ್ಲಾದೇಶ ತಂಡ 7ನೇ ಬಾರಿಗೆ ತವರಿನಲ್ಲಿ ಟೆಸ್ಟ್‌ನಲ್ಲಿ ಅತಿ ಕಡಿಮೆ ರನ್​ಗೆ ಆಲೌಟ್ ಆದ ನಾಚಿಕೆಗೇಡಿನ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಬಾಂಗ್ಲಾದೇಶ ಕ್ರಿಕೆಟ್ ತಂಡವು 2021 ರಲ್ಲಿ ಜಿಂಬಾಬ್ವೆ ವಿರುದ್ಧ 106 ರನ್ ಗಳಿಸಿದ್ದು ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ಅತಿ ಕಡಿಮೆ ಸ್ಕೋರ್ ಆಗಿತ್ತು. ಇದೀಗ 23 ವರ್ಷಗಳ ಬಳಿಕ ತಂಡ 7ನೇ ಅತಿ ಕಡಿಮೆ ಸ್ಕೋರ್ ಗಳಿಸಿದೆ.

4 / 7
ಇನ್ನು ತವರು ಟೆಸ್ಟ್​ನಲ್ಲಿ ಬಾಂಗ್ಲಾದೇಶ ತಂಡದ ಅತ್ಯಲ್ಪ ಮೊತ್ತವನ್ನು ನೋಡುವುದಾದರೆ.. 2002 ರಲ್ಲಿ ಡಾಕಾದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಕೇವಲ 87 ರನ್​ಗಳಿಗೆ ಆಲೌಟ್ ಆಗಿತ್ತು. ಆ ನಂತರ 2021 ರಲ್ಲಿ ಪಾಕಿಸ್ತಾನದ ವಿರುದ್ಧ ಕೂಡ 87 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿತ್ತು.

5 / 7
2000ದಲ್ಲಿ ಟೀಂ ಇಂಡಿಯಾ ವಿರುದ್ಧ ನಡೆದಿದ್ದ ಢಾಕಾ ಟೆಸ್ಟ್ ಪಂದ್ಯದಲ್ಲಿ 91 ರನ್​ಗಳಿಗೆ ಆಲೌಟ್ ಆಗಿದ್ದ ಬಾಂಗ್ಲಾ, 2003 ರಲ್ಲಿ ಆಫ್ರಿಕಾ ವಿರುದ್ಧ 102 ರನ್ ಬಾರಿಸಿದ್ದ ಜಿಂಬಾಬ್ವೆ ವಿರುದ್ಧವೂ 102 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ 106 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

6 / 7
ಈ ಪಂದ್ಯದಲ್ಲಿ ಆಫ್ರಿಕಾ ಬೌಲರ್ ಕಗಿಸೊ ರಬಾಡ 11 ಓವರ್‌ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರು. ಈ ಮೂಲಕ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳನ್ನು ಪೂರೈಸಿದರು. ಇದರೊಂದಿಗೆ 300 ವಿಕೆಟ್ ಪಡೆದ ಆಫ್ರಿಕಾದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ.

7 / 7
ರಬಾಡ 11,817 ಎಸೆತಗಳಲ್ಲಿ 300 ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದು, ಅತಿ ಕಡಿಮೆ ಎಸೆತಗಳನ್ನು ಬೌಲ್ ಮಾಡುವ ಮೂಲಕ 300 ವಿಕೆಟ್ ಪೂರೈಸಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆಯು ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಕಾರ್ ಯೂನಿಸ್ ಹೆಸರಿನಲ್ಲಿತ್ತು, ಅವರು 12,602 ಎಸೆತಗಳಲ್ಲಿ 300 ವಿಕೆಟ್‌ಗಳನ್ನು ಪೂರೈಸಿದ್ದರು.