ಬೆಂಗಳೂರಿನಲ್ಲಿ WPL ಮ್ಯಾಚ್ ನೋಡಲು ಹೋಗುವವರಿಗೆ ಗುಡ್ ನ್ಯೂಸ್: ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಫೆಬ್ರುವರಿ 21 ರಿಂದ ಮಾರ್ಚ್ 1 ರವರೆಗೆ ನಡೆಯುವ ಪಂದ್ಯಗಳಿಗೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸೇವೆ ವಿಸ್ತರಿಸಲಾಗಿದೆ. ಆ ಮೂಲಕ WPL ಅಭಿಮಾನಿಗಳಿಗೆ ಮೆಟ್ರೋ ಗುಡ್ನ್ಯೂಸ್ ನೀಡಿದೆ.

ಬೆಂಗಳೂರು, ಫೆಬ್ರವರಿ 20: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 01 ರಂದು ಪಂದ್ಯಗಳು ನಡೆಯಲಿದ್ದು, ಹಾಗಾಗಿ ನಮ್ಮ ಮೆಟ್ರೋ ರೈಲು (Namma Metro) ಸೇವೆಯನ್ನು ವಿಸ್ತರಣೆ ಮಾಡಿದೆ. ಆ ಮೂಲಕ WPL ಮ್ಯಾಚ್ ನೋಡಲು ಹೋಗುವವರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯಲಿರುವ ಹಿನ್ನೆಲೆ ನಮ್ಮ ಮೆಟ್ರೋ ರೈಲು ಸೇವೆಯನ್ನು ವಿಸ್ತರಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕ್ರಿಕೆಟ್ ಪಂದ್ಯಗಳನ್ನು ಅಭಿಮಾನಿಗಳು ನೋಡಲು ಬರುತ್ತಾರೆ. ಆ ದೃಷ್ಟಿಯಿಂದ ಅವರ ಅನುಕೂಲಕ್ಕಾಗಿ ಮೆಟ್ರೋ ವ್ಯವಸ್ಥೆ ಕಲ್ಪಿಸಿದೆ.
ಇದನ್ನೂ ಓದಿ: ದರ ಏರಿಕೆ ವಿರುದ್ಧ ಪ್ರಯಾಣಿಕರ ಸೆಡ್ಡು: ನಮ್ಮ ಮೆಟ್ರೋ ಬಾಯ್ಕಾಟ್ ಮಾಡಲು ಚಿಂತನೆ
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಿದ್ದು, ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ರಾತ್ರಿ 11.20ಕ್ಕೆ ಕೊನೆಯ ರೈಲು ಸೇವೆ ಇರಲಿದೆ. ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡಲಿದೆ.
ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ಗಳು (ಎನ್‌ಸಿಎಂಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ‘ಟಿವಿ9’ ರಿಯಾಲಿಟಿ ಚೆಕ್: ಅನೇಕ ಕಡೆಗಳಲ್ಲಿ ಕಡಿಮೆಯೇ ಆಗಿಲ್ಲ ಮೆಟ್ರೋ ಟಿಕೆಟ್ ದರ!
ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ , ಮುಂಬೈ ಇಂಡಿಯನ್ಸ್ ಐದು ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡುತ್ತಿವೆ. 2024 ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೇರಿತ್ತು.
ಮತ್ತಷ್ಟು ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:15 pm, Thu, 20 February 25