AUS vs BAN: ಕಾಂಗರೂಗಳ ನಾಡಲ್ಲಿ ಇತಿಹಾಸ ನಿರ್ಮಿಸಿದ ಬಾಂಗ್ಲಾ ವೇಗಿ

Updated on: Aug 13, 2026 | 7:06 PM

Hasan Mahmud's Historic 6-Wicket Haul: 23 ವರ್ಷಗಳ ನಂತರ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಬಾಂಗ್ಲಾದೇಶ, ಮೊದಲ ಟೆಸ್ಟ್‌ನ ಮೊದಲ ದಿನವೇ ಆತಿಥೇಯರನ್ನು ಬೆಚ್ಚಿಬೀಳಿಸಿದೆ. ವೇಗಿ ಹಸನ್ ಮಹಮೂದ್ (6/55) ಅದ್ಭುತ ಬೌಲಿಂಗ್ ಪ್ರದರ್ಶಿಸಿ ಆಸ್ಟ್ರೇಲಿಯಾವನ್ನು 198 ರನ್‌ಗಳಿಗೆ ಆಲೌಟ್ ಮಾಡಿದರು. ಆಸ್ಟ್ರೇಲಿಯಾ ನೆಲದಲ್ಲಿ 5ಕ್ಕೂ ಹೆಚ್ಚು ವಿಕೆಟ್ ಪಡೆದ ಮೊದಲ ಬಾಂಗ್ಲಾದೇಶಿ ಬೌಲರ್ ಎಂಬ ಐತಿಹಾಸಿಕ ದಾಖಲೆ ಬರೆದ ಮಹಮೂದ್, ಬಾಂಗ್ಲಾದೇಶಕ್ಕೆ ಮೇಲುಗೈ ತಂದುಕೊಟ್ಟರು.

1 / 5
ಬಾಂಗ್ಲಾದೇಶ ಬರೋಬ್ಬರಿ 23 ವರ್ಷಗಳ ನಂತರ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಪಂದ್ಯದ ಮೊದಲ ದಿನವೇ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ಮೇಲುಗೈ ಸಾಧಿಸಿದೆ.

ಬಾಂಗ್ಲಾದೇಶ ಬರೋಬ್ಬರಿ 23 ವರ್ಷಗಳ ನಂತರ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಪಂದ್ಯದ ಮೊದಲ ದಿನವೇ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ಮೇಲುಗೈ ಸಾಧಿಸಿದೆ.

2 / 5

ಡಾರ್ವಿನ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ನ ಮೊದಲ ದಿನದಂದು ಮೊದಲು ಬ್ಯಾಟಿಂಗ್‌ ಮಾಡಿದ ಆಸೀಸ್ ಬ್ಯಾಟಿಂಗ್‌ ವಿಭಾಗವನ್ನು ಬಾಂಗ್ಲಾದೇಶದ ವೇಗದ ಬೌಲರ್‌ಗಳು ಕಟ್ಟಿಹಾಕಿದ್ದಾರೆ. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ ಮೊದಲ ದಿನದ ಮೂರನೇ ಸೆಷನ್‌ನ ವೇಳೆಗೆ ಕೇವಲ 198 ರನ್‌ಗಳಿಗೆ ಆಲೌಟ್ ಆಯಿತು.

3 / 5

ಆಸ್ಟ್ರೇಲಿಯಾ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಬಾಂಗ್ಲಾದೇಶದ ವೇಗಿ ಹಸನ್ ಮಹಮೂದ್ ಪ್ರಮುಖ ಪಾತ್ರವಹಿಸಿದರು. ಹಸನ್ ಮಹಮೂದ್ ಮೊದಲ ಇನ್ನಿಂಗ್ಸ್​ನಲ್ಲಿ ಆಸೀಸ್ ಆರಂಭಿಕ ಟ್ರಾವಿಸ್ ಹೆಡ್ ಮತ್ತು ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಸೇರಿದಂತೆ ಬರೋಬ್ಬರಿ ಆರು ಆಟಗಾರರನ್ನು ಔಟ್ ಮಾಡಿದರು.

4 / 5

ಈ 6 ವಿಕೆಟ್​ಗಳ ಗೊಂಚಲು ಪಡೆಯುವ ಮೂಲಕ ಹಸನ್ ಮಹಮೂದ್ ಆಸ್ಟ್ರೇಲಿಯಾದಲ್ಲಿ ದಾಖಲೆ ಕೂಡ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಇನ್ನಿಂಗ್ಸ್‌ನಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಬಾಂಗ್ಲಾದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 5

ಹಸನ್ ಮಹಮೂದ್ ಮೊದಲ ಇನ್ನಿಂಗ್ಸ್​ನಲ್ಲಿ 17 ಓವರ್​ಗಳನ್ನು ಬೌಲ್ ಮಾಡಿ 55 ರನ್ ನೀಡಿ 6 ವಿಕೆಟ್ ಕಬಳಿಸಿದರು. 3.20 ರ ಎಕಾನಮಿ ದರದಲ್ಲಿ ರನ್ ಬಿಟ್ಟುಕೊಟ್ಟ ಹಸನ್ ಮಹಮೂದ್, ಜೇಕ್ ವೆದರೋಲ್ಡ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಪ್ಯಾಟ್ ಕಮ್ಮಿನ್ಸ್, ನಾಥನ್ ಲಿಯಾನ್ ಅವರ ವಿಕೆಟ್​ಗಳನ್ನು ಕಬಳಿಸಿದರು.

ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Loading...
Unable to load recommendations.
Follow Us