ಟೀಮ್ ಇಂಡಿಯಾ ವಿರುದ್ಧ ವಿಶ್ವ ದಾಖಲೆ ನಿರ್ಮಿಸಿದ ಮೆಕ್ಕಾರ್ಥಿ
Barry McCarthy Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 59 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬ್ಯಾರಿ ಮೆಕ್ಕಾರ್ಥಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
Updated on: Aug 19, 2023 | 7:23 PM

ಡಬ್ಲಿನ್ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಐರ್ಲೆಂಡ್ನ ಬ್ಯಾರಿ ಮೆಕ್ಕಾರ್ಥ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭಾರತೀಯ ಬೌಲರ್ಗಳ ಬೆಂಡೆತ್ತುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 59 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಬ್ಯಾರಿ ಮೆಕ್ಕಾರ್ಥಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಅಷ್ಟೇ ಅಲ್ಲದೆ ಅಂತಿಮ ಓವರ್ನ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸುವ ಮೂಲಕ 33 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ವಿರುದ್ಧ 7ಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತ್ಯಧಿಕ ರನ್ಗಳಿಸಿದ ಆಟಗಾರ ಎಂಬ ದಾಖಲೆ ಬ್ಯಾರಿ ಮೆಕ್ಕಾರ್ಥಿ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ಟೀಮ್ ಇಂಡಿಯಾ ವಿರುದ್ಧ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಕೇಶವ್ ಮಹಾರಾಜ್ 41 ರನ್ಗಳಿಸಿದ್ದು ಇದುವರೆಗಿನ ಗರಿಷ್ಠ ಸ್ಕೋರ್ ಆಗಿತ್ತು.

ಇದೀಗ ಈ ದಾಖಲೆಯನ್ನು ಮುರಿದು ಬ್ಯಾರಿ ಮೆಕ್ಕಾರ್ಥಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ವಿರುದ್ಧ ಬೌಲರ್ಗಳ ಕ್ರಮಾಂಕದಲ್ಲಿ ಕಣಕ್ಕಿಳಿದು ಹಾಫ್ ಸೆಂಚುರಿ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಕೇವಲ 31 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಐರ್ಲೆಂಡ್ ತಂಡವು ಅಂತಿಮವಾಗಿ 139 ರನ್ ಪೇರಿಸಿ ವಿಶೇಷ ದಾಖಲೆ ನಿರ್ಮಿಸಿದೆ. ಅಂದರೆ ಅತ್ಯಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಂಡು ಭಾರತದ ವಿರುದ್ಧ ಅತ್ಯಧಿಕ ಸ್ಕೋರ್ಗಳಿಸಿದ ತಂಡವೆಂಬ ದಾಖಲೆ ಇದೀಗ ಐರ್ಲೆಂಡ್ ಪಾಲಾಗಿದೆ.

When and Where Ireland vs India Third T20I Match check Live Streaming Details



















