ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
TV9 Web | Updated By: ಝಾಹಿರ್ ಯೂಸುಫ್
Updated on:
Aug 15, 2023 | 10:58 PM
Suryakumar Yadav Records: ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೊದಲ 50 ಟಿ20 ಇನಿಂಗ್ಸ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವದ 2ನೇ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಮೊದಲ 50 ಇನಿಂಗ್ಸ್ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ...
1 / 8
ವೆಸ್ಟ್ ಇಂಡೀಸ್ ವಿರುದ್ಧ ನಡೆದ 5ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 45 ಎಸೆತಗಳಲ್ಲಿ 61 ರನ್ ಬಾರಿಸಿ ಮಿಂಚಿದ್ದರು. ಈ ಭರ್ಜರಿ ಬ್ಯಾಟಿಂಗ್ ವೇಳೆ 3 ಸಿಕ್ಸ್ ಹಾಗೂ 4 ಫೋರ್ಗಳನ್ನು ಕೂಡ ಬಾರಿಸಿದ್ದರು.
2 / 8
ವಿಶೇಷ ಎಂದರೆ ಈ 3 ಸಿಕ್ಸ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೊದಲ 50 ಟಿ20 ಇನಿಂಗ್ಸ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವದ 2ನೇ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದಿದ್ದಾರೆ.
3 / 8
ಟಿ20 ಕ್ರಿಕೆಟ್ನಲ್ಲಿ ಮೊದಲ 50 ಇನಿಂಗ್ಸ್ಗಳಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ....
4 / 8
1- ಎವಿನ್ ಲೂಯಿಸ್: ವೆಸ್ಟ್ ಇಂಡೀಸ್ ತಂಡದ ಸ್ಪೋಟಕ ದಾಂಡಿಗ ಎವಿನ್ ಲೂಯಿಸ್ ತನ್ನ ಮೊದಲ 50 ಇನಿಂಗ್ಸ್ಗಳಲ್ಲಿ ಒಟ್ಟು 111 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ.
5 / 8
2- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಮೊದಲ 50 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 104 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಮೊದಲ ಐವತ್ತು ಟಿ20 ಇನಿಂಗ್ಸ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
6 / 8
3- ಕ್ರಿಸ್ ಗೇಲ್: ವೆಸ್ಟ್ ಇಂಡೀಸ್ನ ದೈತ್ಯ ಕ್ರಿಸ್ ಗೇಲ್ ಆರಂಭದ 50 ಇನಿಂಗ್ಸ್ಗಳಲ್ಲಿ ಒಟ್ಟು 103 ಸಿಕ್ಸ್ಗಳನ್ನು ಬಾರಿಸಿದ್ದಾರೆ.
7 / 8
4- ಕಾಲಿನ್ ಮನ್ರೊ: ನ್ಯೂಝಿಲೆಂಡ್ನ ಎಡಗೈ ದಾಂಡಿಗ ಕಾಲಿನ್ ಮನ್ರೊ ಮೊದಲ 50 ಟಿ20 ಇನಿಂಗ್ಸ್ಗಳಲ್ಲಿ 92 ಸಿಕ್ಸ್ ಸಿಡಿಸಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
8 / 8
5- ಆರೋನ್ ಫಿಂಚ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಮೊದಲ 50 ಟಿ20 ಇನಿಂಗ್ಸ್ನಲ್ಲಿ ಒಟ್ಟು 79 ಸಿಕ್ಸ್ಗಳನ್ನು ಬಾರಿಸಿದ್ದಾರೆ.