Cricket Records: ಒಂದೇ ಓವರ್​ನಲ್ಲಿ 6 ಸಿಕ್ಸ್​ ಸಿಡಿಸಿದ 5 ಬ್ಯಾಟ್ಸ್​ಮನ್​ಗಳು ಯಾರು ಗೊತ್ತಾ?

| Updated By: ಝಾಹಿರ್ ಯೂಸುಫ್

Updated on: Apr 14, 2024 | 8:53 AM

Cricket Records: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇದೀಗ ಐದನೇ ಸ್ಥಾನದಲ್ಲಿ ದೀಪೇಂದ್ರ ಸಿಂಗ್ ಐರಿ ಕಾಣಿಸಿಕೊಂಡಿದ್ದಾರೆ. ಐರಿಗೂ ಮುನ್ನ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ನಾಲ್ವರು ಒಂದೇ ಓವರ್​ನಲ್ಲಿ ಬ್ಯಾಕ್ ಟು ಬ್ಯಾಖ್ 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಆ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

1 / 6
ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ ಐವರು ಬ್ಯಾಟರ್​ಗಳು 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸೌತ್ ಆಫ್ರಿಕಾದ ಮಾಜಿ ಆಟಗಾರ ಹರ್ಷಲ್ ಗಿಬ್ಸ್. ಅಂದರೆ ಯುವರಾಜ್ ಸಿಂಗ್​ಗೂ ಮೊದಲೇ ಗಿಬ್ಸ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದರು. ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದು ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 6
1- ಹರ್ಷಲ್ ಗಿಬ್ಸ್​: ಮಾರ್ಚ್ 16, 2007 ರಲ್ಲಿ ನಡೆದ ನೆದರ್​ಲೆಂಡ್ಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಡಾನ್ ವ್ಯಾನ್ ಬಂಗೆ ಓವರ್​ನಲ್ಲಿ ಸೌತ್ ಆಫ್ರಿಕಾ ದಾಂಡಿಗ ಹರ್ಷಲ್ ಗಿಬ್ಸ್ 6 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

3 / 6
2- ಯುವರಾಜ್ ಸಿಂಗ್: ಸೆಪ್ಟೆಂಬರ್ 19, 2007 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್​ನಲ್ಲಿ ಎಡಗೈ ದಾಂಡಿಗ ಯುವರಾಜ್ ಸಿಂಗ್ ಬ್ಯಾಕ್ ಟು ಬ್ಯಾಕ್ 6 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದಿದ್ದಾರೆ.

4 / 6
3- ಕೀರನ್ ಪೊಲಾರ್ಡ್​: 2021 ರಲ್ಲಿ ಶ್ರೀಲಂಕಾ ಸ್ಪಿನ್ನರ್​ ಅಕಿಲ ಧನಂಜಯ ಓವರ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ಕೀರನ್ ಪೊಲಾರ್ಡ್ 6 ಸಿಕ್ಸ್ ಬಾರಿಸಿದ್ದಾರೆ. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
4- ಜಸ್ಕರನ್ ಮಲ್ಹೋತ್ರಾ: 2021 ರಲ್ಲಿ ಪಪುವಾ ನ್ಯೂ ಗಿನಿಯಾ ತಂಡದ ಬೌಲರ್​ ಗೌಡಿ ಟೋಕಾರ ಅವರ ಓವರ್​ನಲ್ಲಿ ಯುಎಸ್​ಎ ಬ್ಯಾಟರ್ ಜಸ್ಕರನ್ ಮಲ್ಹೋತ್ರಾ 6 ಸಿಕ್ಸ್ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಹರ್ಷಲ್ ಗಿಬ್ಸ್ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
5- ದೀಪೇಂದ್ರ ಸಿಂಗ್ ಐರಿ: 2024 ರಲ್ಲಿ ಖತಾರ್ ವಿರುದ್ಧದ ಟಿ20 ಪಂದ್ಯದಲ್ಲಿ ಕ್ರಮಾನ್ ಖಾನ್ ಓವರ್​ನಲ್ಲಿ ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.