AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 4 ಬ್ಯಾಟರ್​ಗಳು ಇವರೇ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಓವರ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಇದೀಗ ಡೇರಿಯಸ್ ವಿಸ್ಸರ್ ಹೆಸರಿಗೆ ಸೇರ್ಪಡೆಯಾಗಿದೆ. ವನವಾಟು ತಂಡದ ವಿರುದ್ಧದ ಪಂದ್ಯದಲ್ಲಿ ನಿಪಿಕೊ ಅವರ ಓವರ್​ನಲ್ಲಿ 39 (6 ಸಿಕ್ಸ್+3 ನೋಬಾಲ್) ರನ್​ಗಳನ್ನು ಬಾರಿಸುವ ಮೂಲಕ ಡೇರಿಯಸ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 21, 2024 | 1:56 PM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನಾಲ್ವರು ಬ್ಯಾಟರ್​ಗಳು ಮಾತ್ರ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇವರಲ್ಲಿ ಮೊದಲಿಗ ಟೀಮ್ ಇಂಡಿಯಾದ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್. ಇದೀಗ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಿ ಡೇರಿಯಸ್ ವಿಸ್ಸರ್ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

1 / 5
1- ಯುವರಾಜ್ ಸಿಂಗ್: ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಯುವರಾಜ್ ಸಿಂಗ್ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್. 2007ರ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್​ನ ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿ ಈ ದಾಖಲೆ ಬರೆದಿದ್ದರು.

2 / 5
2- ಕೀರನ್ ಪೊಲಾರ್ಡ್: ಯುವರಾಜ್ ಸಿಂಗ್ ಬಳಿಕ ಟಿ20 ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ವೆಸ್ಟ್ ಇಂಡೀಸ್​​ನ ಕೀರನ್ ಪೊಲಾರ್ಡ್. 2021ರಲ್ಲಿ ಶ್ರೀಲಂಕಾದ ಅಕಿಲ ಧನಂಜಯ ಓವರ್​ನಲ್ಲಿ ಪೊಲಾರ್ಡ್ 6 ಸಿಕ್ಸ್​ ಸಿಡಿಸಿ ದಾಖಲೆ ನಿರ್ಮಿಸಿದ್ದರು.

3 / 5
3- ದೀಪೇಂದ್ರ ಸಿಂಗ್ ಐರಿ: ಎಸಿಸಿ ಪ್ರೀಮಿಯರ್ ಕಪ್ ಪಂದ್ಯದಲ್ಲಿ ನೇಪಾಳದ ಬ್ಯಾಟರ್ ದೀಪೇಂದ್ರ ಸಿಂಗ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದರು. ಕತಾರ್ ವಿರುದ್ಧದ ಪಂದ್ಯದಲ್ಲಿ ಕಮ್ರಾನ್ ಖಾನ್ ಓವರ್​ನಲ್ಲಿ 6 ಸಿಕ್ಸ್ ಬಾರಿಸಿ ಈ ಸಾಧನೆ ಮಾಡಿದ್ದರು.

4 / 5
4- ಡೇರಿಯಸ್ ವಿಸ್ಸರ್: ಟಿ20 ವಿಶ್ವಕಪ್ ಪೂರ್ವ ಏಷ್ಯಾ-ಪೆಸಿಫಿಕ್ ವಲಯದ ಅರ್ಹತಾ ಪಂದ್ಯದಲ್ಲಿ ಸಮೋಅದ ಬ್ಯಾಟರ್ ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 6 ಸಿಕ್ಸ್ ಬಾರಿಸಿದ್ದಾರೆ. ವನವಾಟು ತಂಡದ ವೇಗಿ ನಲಿನ್ ನಿಪಿಕೊ ಅವರ ಓವರ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳ ಸುರಿಮಳೆಗೈಯ್ಯುವ ಮೂಲಕ ಡೇರಿಯಸ್ ವಿಸ್ಸರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!