ಟಿ20 ಕ್ರಿಕೆಟ್ನಲ್ಲಿ ಒಂದೇ ಓವರ್ನಲ್ಲಿ 6 ಸಿಕ್ಸ್ ಬಾರಿಸಿದ 4 ಬ್ಯಾಟರ್ಗಳು ಇವರೇ
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಓವರ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಇದೀಗ ಡೇರಿಯಸ್ ವಿಸ್ಸರ್ ಹೆಸರಿಗೆ ಸೇರ್ಪಡೆಯಾಗಿದೆ. ವನವಾಟು ತಂಡದ ವಿರುದ್ಧದ ಪಂದ್ಯದಲ್ಲಿ ನಿಪಿಕೊ ಅವರ ಓವರ್ನಲ್ಲಿ 39 (6 ಸಿಕ್ಸ್+3 ನೋಬಾಲ್) ರನ್ಗಳನ್ನು ಬಾರಿಸುವ ಮೂಲಕ ಡೇರಿಯಸ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಒಂದೇ ಓವರ್ನಲ್ಲಿ 6 ಸಿಕ್ಸ್ ಬಾರಿಸಿದ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.