7 ಇನಿಂಗ್ಸ್ನಲ್ಲಿ 3 ಶತಕ… ದಾಖಲೆಗಳನ್ನು ಉಡೀಸ್ ಮಾಡಿದ ಸ್ಟೀವ್ ಸ್ಮಿತ್
Steve Smith Records: ಬಿಗ್ ಬ್ಯಾಷ್ ಲೀಗ್ನಲ್ಲಿ ಭರ್ಜರಿ ಸೆಂಚುರಿಗಳನ್ನು ಬಾರಿಸುತ್ತಾ ಸ್ಟೀವ್ ಸ್ಮಿತ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಅದು ಕೂಡ ಕೇವಲ 32 ಇನಿಂಗ್ಸ್ಗಳ ಮೂಲಕ ಎಂಬುದು ವಿಶೇಷ. ಅಂದರೆ 100 ಪಂದ್ಯಗಳಲ್ಲಿ ಕಣಕ್ಕಿಳಿದು ಬರೆದ ದಾಖಲೆಗಳನ್ನು ಸ್ಮಿತ್ ಕೇವಲ 32 ಪಂದ್ಯಗಳ ಮೂಲಕ ಅಳಿಸಿ ಹಾಕಿದ್ದಾರೆ.
Updated on: Jan 12, 2025 | 9:53 AM

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಸ್ಟೀವ್ ಸ್ಮಿತ್ ಅಬ್ಬರ ಮುಂದುವರೆದಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಶತಕಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಬಿಗ್ ಬ್ಯಾಷ್ ಲೀಗ್ನಲ್ಲಿ ಆಡಿದ ಕೊನೆಯ 7 ಇನಿಂಗ್ಸ್ಗಳಲ್ಲಿ ಸ್ಮಿತ್ ಬರೋಬ್ಬರಿ 3 ಶತಕ ಬಾರಿಸಿದ್ದಾರೆ.

ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿಯುತ್ತಿರುವ ಸ್ಟೀವ್ ಸ್ಮಿತ್, ಪರ್ತ್ ಸ್ಕಾಚರ್ಸ್ ವಿರುದ್ಧದ ಪಂದ್ಯದಲ್ಲಿ 64 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 121 ರನ್ ಚಚ್ಚಿದ್ದಾರೆ. ಈ ಶತಕದೊಂದಿಗೆ ಬಿಗ್ ಬ್ಯಾಷ್ ಲೀಗ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದದ್ದು ಬೆನ್ ಮೆಕ್ಡಮಾರ್ಟ್. ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ 100 ಪಂದ್ಯಗಳಲ್ಲಿ 3 ಶತಕ ಸಿಡಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸ್ಟೀವ್ ಸ್ಮಿತ್ ಸರಿಗಟ್ಟಿದ್ದಾರೆ.

ಬಿಗ್ ಬ್ಯಾಷ್ ಲೀಗ್ನಲ್ಲಿ ಈವರೆಗೆ 32 ಇನಿಂಗ್ಸ್ ಆಡಿರುವ ಸ್ಟೀವ್ ಸ್ಮಿತ್ 3 ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ಇತಿಹಾಸದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತ್ಯುತ್ತಮ ಸರಾಸರಿಯೊಂದಿಗೆ 1000 ರನ್ ಪೂರೈಸಿದ ದಾಖಲೆ ಕೂಡ ಸ್ಟೀವ್ ಸ್ಮಿತ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮಾಜಿ ಆಟಗಾರ ಬ್ರಾಡ್ ಹಾಡ್ಜ್ ಹೆಸರಿನಲ್ಲಿತ್ತು. ಹಾಡ್ಜ್ 42.78 ಸರಾಸರಿಯೊಂದಿಗೆ ಸಾವಿರ ರನ್ ಪೂರೈಸಿದ್ದರು.

ಇದೀಗ ಸ್ಟೀವ್ ಸ್ಮಿತ್ ಕೇವಲ 32 ಇನಿಂಗ್ಸ್ಗಳ ಮೂಲಕ 1000ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಅದು ಕೂಡ 45.88 ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತ್ಯುತ್ತಮ ಸರಾಸರಿಯೊಂದಿಗೆ 1000 ರನ್ ಕಲೆಹಾಕಿದ ದಾಖಲೆಯನ್ನು ಸ್ಟೀವ್ ಸ್ಮಿತ್ ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




