ಇಂಟರ್ನ್ಯಾಷನಲ್ ಲೀಗ್ ಟಿ20: ಯುಎಇ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಐಎಲ್ಟಿ20 ಲೀಗ್ ಜನವರಿ 11 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 9 ರಂದು ನಡೆಯಲಿದೆ. ದುಬೈ, ಶಾರ್ಜಾ ಹಾಗೂ ಅಬುಧಾಬಿಯಲ್ಲಿ ಜರುಗಲಿರುವ ಈ ಟೂರ್ನಿಯಲ್ಲಿ ಯುಎಇ, ವೆಸ್ಟ್ ಇಂಡೀಸ್, ಇಂಗ್ಲೆಂಡ್, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ್, ನ್ಯೂಝಿಲೆಂಡ್ ತಂಡಗಳ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.