AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ

Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿತು. ಈ ನಿರ್ಧಾರದಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸುಮಾರು 3.25 ಬಿಲಿಯನ್ ಟಾಕಾ ಸೇರಿದಂತೆ ಭಾರೀ ಆರ್ಥಿಕ ನಷ್ಟವಾಗಲಿದೆ. ದ್ವಿಪಕ್ಷೀಯ ಸರಣಿಗಳ ಮೇಲೂ ಪರಿಣಾಮ ಬೀರಲಿದೆ.

ಪೃಥ್ವಿಶಂಕರ
|

Updated on:Jan 23, 2026 | 3:19 PM

Share
ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು.

1 / 6
ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ ಮಂಡಳಿಯ ಸಭೆಯು ಭಾರತದಲ್ಲಿ ಯಾವುದೇ ಭದ್ರತಾ ಬೆದರಿಕೆ ಇಲ್ಲ ಎಂದು ಹೇಳಿ ಈ ಪ್ರಸ್ತಾಪವನ್ನು ತಿರಸ್ಕರಿಸಿತು.

2 / 6
ಮಾತ್ರವಲ್ಲದೆ ಬಾಂಗ್ಲಾ ತಂಡ ಭಾರತಕ್ಕೆ ಪ್ರಯಾಣಿಸದಿದ್ದರೆ, ನಿಮ್ಮ ಸ್ಥಾನದಲ್ಲಿ ಬೇರೆ ತಂಡವನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾಗುತ್ತದೆ ಎಂದು ಐಸಿಸಿ, ಬಿಸಿಬಿಗೆ ಎಚ್ಚರಿಕೆ ನೀಡಿತ್ತು. ಇದರ ಹೊರತಾಗಿಯೂ, ಬಾಂಗ್ಲಾದೇಶ ತನ್ನ ನಿಲುವು ಬದಲಾಯಿಸದೆ ಪಂದ್ಯಾವಳಿಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

3 / 6
ಈ ನಿರ್ಧಾರದಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರೀ ಬೆಲೆಯನ್ನು ತೆರಬೇಕಾಗಿದೆ. ಐಸಿಸಿಯಿಂದ ಬರುವ ವಾರ್ಷಿಕ ಆದಾಯದ ಪಾಲಿನಲ್ಲಿ ಸುಮಾರು 3.25 ಬಿಲಿಯನ್ ಬಾಂಗ್ಲಾದೇಶಿ ಟಾಕಾ (ಸುಮಾರು 240 ಕೋಟಿ ಭಾರತೀಯ ರೂಪಾಯಿಗಳು) ನಷ್ಟವಾಗಬಹುದು ಎಂದು ವರದಿಯಾಗಿದೆ.

4 / 6
ಇದಲ್ಲದೆ, ಪ್ರಸಾರ ಹಕ್ಕುಗಳು, ಪ್ರಾಯೋಜಕತ್ವಗಳು ಮತ್ತು ಇತರ ಗಳಿಕೆಗಳಿಂದ ಬರುವ ಒಟ್ಟು ಆರ್ಥಿಕ ನಷ್ಟವು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 60 ಅಥವಾ ಅದಕ್ಕಿಂತ ಹೆಚ್ಚಾಗಬಹುದು. ಇದರ ಜೊತೆಗೆ ಆಟಗಾರರಿಗೆ ಸಿಗುತ್ತಿದ್ದ ಪಂದ್ಯ ಶುಲ್ಕ, ಬೋನಸ್‌ ಮತ್ತು ಬಹುಮಾನದ ಹಣಕ್ಕೂ ಕತ್ತರಿ ಬಿದ್ದಿದೆ.

5 / 6
ಈ ವಿವಾದವು ದ್ವಿಪಕ್ಷೀಯ ಕ್ರಿಕೆಟ್ ಮೇಲೂ ಪರಿಣಾಮ ಬೀರಬಹುದು. ಪೂರ್ವ ನಿಗದಿಯಂತೆ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಭಾರತ ತಂದ ಬಾಂಗ್ಲಾದೇಶ ಪ್ರವಾಸವನ್ನು ಮಾಡಬೇಕಿತ್ತು. ಆದರೀಗ ಆ ಪ್ರವಾಸ ರದ್ದಾಗಬಹುದು. ಇದರಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಮತ್ತಷ್ಟು ನಷ್ಟಕ್ಕೆ ಕಾರಣವಾಗಬಹುದು. ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು 2025 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಬಿಸಿಸಿಐ ಅದನ್ನು ಮುಂದೂಡಿತ್ತು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಪ್ರವಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತಾದರೂ ಅದು ನಡೆಯುವ ಸಾಧ್ಯತೆಗಳಿಲ್ಲ.

6 / 6

Published On - 3:18 pm, Fri, 23 January 26

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್

8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!

ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ