AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ

Zaheer Khan Joins BCCI: ಟೀಂ ಇಂಡಿಯಾದ ಬೌಲಿಂಗ್ ವಿಭಾಗದ ಸಮಸ್ಯೆ ಬಗೆಹರಿಸಲು ಬಿಸಿಸಿಐ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರ ನೆರವು ಕೋರಿದೆ. ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದ ಬೌಲರ್‌ಗಳ ಕಳಪೆ ಪ್ರದರ್ಶನದಿಂದ ಚಿಂತಿತವಾಗಿರುವ ಬಿಸಿಸಿಐ, ಬೆಂಗಳೂರಿನ NCA ನಲ್ಲಿ ವಿಶೇಷ ತರಬೇತಿ ಶಿಬಿರ ಆಯೋಜಿಸಿದೆ. ಈ ಶಿಬಿರದಲ್ಲಿ ಜಹೀರ್ ಖಾನ್ ದೇಶದ ಅಗ್ರ ವೇಗದ ಬೌಲರ್‌ಗಳಿಗೆ ತರಬೇತಿ ನೀಡಲಿದ್ದು, ಬೌಲಿಂಗ್ ಕೋಚ್ ಸ್ಥಾನ ತುಂಬಲು ಸಜ್ಜಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 03, 2026 | 10:59 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ ತಂಡದಿಂದ ಸಾಂಘಿಕ ಪ್ರದರ್ಶನ ಮೂಡಿಬರುತ್ತಿಲ್ಲ. ಕೆಲವು ಪಂದ್ಯಗಳಲ್ಲಿ ಬ್ಯಾಟ್ಸ್​ಮನ್​ಗಳು ಕೈಕೊಟ್ಟರೆ, ಇನ್ನು ಕೆಲವು ಪಂದ್ಯಗಳಲ್ಲಿ ಬೌಲರ್​ಗಳು ತೀರ ದುಬಾರಿಯಾಗುತ್ತಿದ್ದಾರೆ. ಇದು ಆಡಳಿತ ಮಂಡಳಿಗೆ ಹೊಸ ತಲೆನೋವು ತಂದಿದೆ.

1 / 5
ಅದರಲ್ಲೂ ತಂಡದ ಬೌಲಿಂಗ್ ವಿಭಾಗ ಅಷ್ಟು ಪರಿಣಾಮಕಾರಿಯಾಗಿ ಕಾಣುತ್ತಿಲ್ಲ. ಜಸ್ಪ್ರೀತ್ ಬುಮ್ರಾರನ್ನು ಹೊರತುಪಡಿಸಿ ಮತ್ತ್ಯಾವ ಬೌಲರ್​ ಕೂಡ ಲಯದಲ್ಲಿ ಕಾಣುತ್ತಿಲ್ಲ. ಹಾಗೆಯೇ ಭವಿಷ್ಯದಲ್ಲಿ ಬುಮ್ರಾರನ್ನು ಬದಲಾಯಿಸುವ ಸಾಮರ್ಥ್ಯವಿರುವ ವೇಗದ ಬೌಲರ್ ಭಾರತದಲ್ಲಿ ಪ್ರಸ್ತುತ ಇಲ್ಲ. ಅದಕ್ಕಾಗಿಯೇ ಬಿಸಿಸಿಐ ಈಗ ಈ ಸಮಸ್ಯೆಯನ್ನು ಪರಿಹರಿಸಲು ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರ ಸಹಾಯವನ್ನು ಕೋರಿದೆ.

2 / 5
ಬಿಸಿಸಿಐ ಜಹೀರ್ ಖಾನ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಈ ತಿಂಗಳು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ವಿಶೇಷ ತರಬೇತಿ ಶಿಬಿರ ನಡೆಯಲಿದ್ದು, ದೇಶದ ಅಗ್ರ ವೇಗದ ಬೌಲರ್‌ಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಜಹೀರ್ ಖಾನ್ ಬೌಲರ್​ಗಳಿಗೆ ತರಬೇತಿ ನೀಡಲಿದ್ದಾರೆ.

3 / 5
ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ.

4 / 5
47 ವರ್ಷದ ಜಹೀರ್ ಖಾನ್ ಭಾರತ ಪರ 92 ಟೆಸ್ಟ್ ಪಂದ್ಯಗಳಲ್ಲಿ 311 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 200 ಏಕದಿನ ಪಂದ್ಯಗಳಲ್ಲಿ 282 ವಿಕೆಟ್ ಮತ್ತು 17 ಟಿ20 ವಿಕೆಟ್ ಕೂಡ ಉರುಳಿಸಿದ್ದಾರೆ. ಐಪಿಎಲ್‌ನಲ್ಲಿ ಜಹೀರ್ ಖಾನ್ 100 ಪಂದ್ಯಗಳನ್ನಾಡಿದ್ದು 102 ವಿಕೆಟ್ ಪಡೆದಿದ್ದಾರೆ. ಸ್ಪಷ್ಟವಾಗಿ, ಜಹೀರ್ ಖಾನ್ ಸಾಕಷ್ಟು ಅನುಭವ ಹೊಂದಿದ್ದ್ದು, ಬಿಸಿಸಿಐ ಈಗ ಇದರ ಲಾಭ ಪಡೆಯಲು ನೋಡುತ್ತಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ

ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು