Virat Kohli: ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

Updated on: May 10, 2025 | 10:17 AM

Virat Kohli Test retirement: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ.

1 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ (Virat Kohli) ದೀರ್ಘಾವಧಿ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪ್ರಸ್ತುತ ಹರಿದಾಡುತ್ತಿರುವ ಸುದ್ದಿಗಳು. ಪ್ರಮುಖ ಇಂಗ್ಲಿಷ್ ಪತ್ರಿಕೆಗಳ ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಟೆಸ್ಟ್​ ಕ್ರಿಕೆಟ್​​ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತನ್ನನ್ನು ಆಯ್ಕೆ ಮಾಡಬೇಡಿ. ತಾನು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇತ್ತ ರೋಹಿತ್ ಶರ್ಮಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ಬೆನ್ನಲ್ಲೇ ಕೊಹ್ಲಿಯ ಈ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.

3 / 6
ಇದಾಗ್ಯೂ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಬಿಸಿಸಿಐ ಅಂಗೀಕರಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಯ್ಕೆ ಸಮಿತಿ ಕೊಹ್ಲಿಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ  ಇನ್ನೆರಡು ವಾರಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

4 / 6
ಒಂದು ವೇಳೆ ವಿರಾಟ್ ಕೊಹ್ಲಿ ತಮ್ಮ ನಿರ್ಧಾರದಲ್ಲಿ ಅಚಲವಾಗಿ ನಿಂತರೆ, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೇ ಕೊಹ್ಲಿ ಪಾಲಿಗೆ ಅಂತಿಮ ಸಿರೀಸ್ ಆಗಿರಲಿದೆ. ಇದರ ನಡುವೆ ಬಿಸಿಸಿಐ ಕೊಹ್ಲಿಯ ಮನವೊಲಿಸಲು ಯಶಸ್ವಿಯಾದರೆ, ಅವರು ಟೀಮ್ ಇಂಡಿಯಾ ಪರ ಇಂಗ್ಲೆಂಡ್​ನಲ್ಲಿ ಕಣಕ್ಕಿಳಿಯಲಿದ್ದಾರೆ.

5 / 6
ಇತ್ತ ವಿರಾಟ್ ಕೊಹ್ಲಿ ಕಣಕ್ಕಿಳಿಯದೇ ನಿವೃತ್ತಿ ಹೊಂದಿದರೆ, ಅದರಿಂದ ಕ್ರಿಕೆಟ್ ಪ್ರೇಮಿಗಳಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕ ಕೂಡ ಬಿಸಿಸಿಐಗೆ ಇದೆ. ಹೀಗಾಗಿ ಕೊಹ್ಲಿಯನ್ನು ಮನವೊಲಿಸಲು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಮುಂದಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

6 / 6
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ನಿವೃತ್ತಿಯ ಅಂಚಿನಲ್ಲಿರುವುದಂತು ಸತ್ಯ. ಆದರೆ ಅದು ಸದ್ಯಕ್ಕೆ ಬೇಡ ಎಂಬುದು ಬಿಸಿಸಿಐನ ನಿರ್ಧಾರ. ಹೀಗಾಗಿ ಕಿಂಗ್ ಕೊಹ್ಲಿ ತಮ್ಮ ನಿರ್ಧಾರವನ್ನು ಬದಲಿಸಲಿದ್ದಾರಾ? ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ವಿದಾಯ ಹೇಳಲಿದ್ದಾರಾ ಕಾದು ನೋಡಬೇಕಿದೆ.