AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

BCCI Awards 2026;ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಲಿದೆ. ಸ್ಮೃತಿ ಮಂಧಾನ ಸತತ ಐದನೇ ಬಾರಿಗೆ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ ಗೆದ್ದು ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. ಶುಭಮನ್ ಗಿಲ್ ವರ್ಷದ ಕ್ರಿಕೆಟಿಗರಾಗಿ ಪಾಲಿ ಉಮ್ರಿಗರ್ ಟ್ರೋಫಿ ಪಡೆದರು. ರಾಹುಲ್ ದ್ರಾವಿಡ್, ರೋಜರ್ ಬಿನ್ನಿ, ಮಿಥಾಲಿ ರಾಜ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಯಿತು. ಭಾರತೀಯ ಕ್ರಿಕೆಟ್‌ನ ಸಾಧಕರಿಗೆ ಈ ಸಮಾರಂಭದಲ್ಲಿ ಗೌರವಿಸಲಾಗುತ್ತಿದೆ.

ಪೃಥ್ವಿಶಂಕರ
|

Updated on: Mar 15, 2026 | 5:19 PM

Share
ಬಿಸಿಸಿಐನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15 ರಂದು ಅಂದರೆ ಇಂದು ದೆಹಲಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಕಳೆದ ಆವೃತ್ತಿಯಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಾಗುತ್ತದೆ. ಇದೇ ಸಮಾರಂಭದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

1 / 5
ಕಳೆದ ಒಂದೂವರೆ ವರ್ಷಗಳಲ್ಲಿ ಐದು ವಿಭಿನ್ನ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಭಾರತ ಮಹಿಳಾ ಹಾಗೂ ಪುರುಷ ತಂಡಗಳನ್ನು ಬಿಸಿಸಿಐ ಗೌರವಿಸಲಿದೆ. ಇದರ ಜೊತೆಗೆ, ವೈಯಕ್ತಿಕ ಪ್ರಶಸ್ತಿಗಳನ್ನು ಸಹ ನೀಡಲಾಗುವುದು. ಇದರಡಿಯಲ್ಲಿ ಸ್ಮೃತಿ ಮಂಧಾನಗೆ 2024-25ರ ಆವೃತ್ತಿಯ ಅತ್ಯುತ್ತಮ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟರ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

2 / 5
ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತೀಯ ಮಹಿಳಾ ತಂಡದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿಯಾಗಿರುವ ಮಂಧಾನ ಕಳೆದ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದು ಅದಕ್ಕಾಗಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಮಂಧಾನಾ 36 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಏಳು ಶತಕಗಳು ಸೇರಿದಂತೆ 1,800 ರನ್ ಗಳಿಸಿದ್ದಾರೆ.

3 / 5
ಈ ಮೂಲಕ ಮಂಧಾನ ಅವರು ಸತತ ಎರಡನೇ ಬಾರಿ ಮತ್ತು ದಾಖಲೆಯ ಐದನೇ ಬಾರಿಗೆ ವರ್ಷದ ಅಂತರರಾಷ್ಟ್ರೀಯ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಪುರುಷರ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ (5) ಈ ಪ್ರಶಸ್ತಿ ಗೆದಿದ್ದ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 5
ಮಂಧಾನ ಜೊತೆಗೆ, ಪುರುಷರ ಕ್ರಿಕೆಟ್‌ನಲ್ಲಿ ಏಕದಿನ ಮತ್ತು ಟೆಸ್ಟ್ ತಂಡಗಳ ಹೊಸ ನಾಯಕ ಶುಭಮನ್ ಗಿಲ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಪಾಲಿ ಉಮ್ರಿಗರ್ ಟ್ರೋಫಿಯನ್ನು ನೀಡಲಾಗುತ್ತದೆ. ಗಿಲ್ ಈ ಪ್ರಶಸ್ತಿಯನ್ನು ಗೆಲ್ಲುತ್ತಿರುವುದು ಇದು ಎರಡನೇ ಬಾರಿ. ಇದಲ್ಲದೆ, ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಮತ್ತು ಮಿಥಾಲಿ ರಾಜ್ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಪಡೆಯಲಿದ್ದಾರೆ.

5 / 5
Follow Us